ಹೈದರಾಬಾದ್: ದಕ್ಷಿಣ ಭಾರತ ಖ್ಯಾತ ನಟ ನಾಸರ್ ಅವರು ಶೂಟಿಂಗ್ ವೇಳೆ ಮೆಟ್ಟಿಲುಗಳ ಮೇಲಿಂದ ಬಿದ್ದಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂಲತಃ ಚೆನ್ನೈನವರಾದ ನಟ ನಾಸರ್ ಅವರು ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಹಾಗೂ ಇಂಗ್ಲಿಷ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ತಮ್ಮ ಹೊಸ ಚಿತ್ರದ ಶೂಟಿಂಗ್ ತೆಲಂಗಾಣ ಪೊಲೀಸ್ ಅಕಾಡೆಮಿಯಲ್ಲಿ ನಡೆದಿತ್ತು. ಈ ವೇಳೆ ಅವರ ಜೊತೆ ಸುಹಾಸಿನಿ ಮಣಿರತ್ನಂ, ಮೆಹ್ರೀನ್ ಪೀರ್ಜಾದಾ, ಸಯ್ಯಾಜಿ ಶಿಂಧೆ ಮುಂತಾದ ಕಲಾವಿದರು ಚಿತ್ರೀಕರಣದಲ್ಲಿ ಭಾಗಿ ಆಗಿದ್ದರು. ಶೂಟಿಂಗ್ ವೇಳೆ ಮೆಟ್ಟಿಲುಗಳ ಮೇಲಿಂದ ಬಿದ್ದ ನಾಸರ್ ಅವರ ಕಣ್ಣಿನ ಭಾಗಕ್ಕೆ ಪೆಟ್ಟಾಗಿದ್ದು, ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲಿಸಿ ಶಸ್ತ್ರ ಚಿಕಿತ್ಸೆ ಮಾಡಿಸಲಾಗಿದೆ.
PublicNext
18/08/2022 09:52 am