ಚೆನ್ನೈ: ತಮಿಳು ಭಾಷೆಯ 'ಮರಿನಾ' ಸಿನಿಮಾ ಖ್ಯಾತಿಯ ನಟ ಥೆನ್ನರಸು ಇಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
2012ರಲ್ಲಿ ತೆರೆಕಂಡ ಮರಿನಾ ಸಿನಿಮಾ ಸಖತ್ ಸದ್ದು ಮಾಡಿತ್ತು. ಈ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶಿವಕಾರ್ತಿಕೇಯನ್, ಓವಿಯಾ ಜೊತೆಗೆ ಥೆನ್ನರಸು ಕಾಣಿಸಿಕೊಂಡಿದ್ದರು. ತಮ್ಮ ಸಹಜ ನಟನೆಯ ಮೂಲಕ ಥೆನ್ನರಸು ಪ್ರೇಕ್ಷಕರ ಮನ ಗೆದ್ದಿದ್ದರು. ಅವರು ಮರಿನಾ ಚಿತ್ರದ ಬಳಿಕ ತಮಿಳಿನ ಹಲವು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ಆದರೆ ಕೌಟುಂಬಿಕ ಕಲಹ ಹಿನ್ನೆಲೆ ನಟ ಸೂಸೈಡ್ ಮಾಡಿಕೊಂಡಿದ್ದಾರೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಥೆನ್ನರಸು ಮೂರು ವರ್ಷಗಳ ಹಿಂದೆ ಪ್ರೀತಿಸಿದ ಯುವತಿಯನ್ನ ಮದುವೆಯಾಗಿದ್ದರು. ದಂಪತಿಗೆ ಎರಡು ವರ್ಷದ ಮಗು ಸಹ ಇದೆ. ಮದ್ಯ ಸೇವನೆ ಚಟಕ್ಕೆ ಬಿದ್ದಿದ್ದ ಥೆನ್ನರಸು ಪತ್ನಿ ಜೊತೆ ಸದಾ ಜಗಳವಾಡುತ್ತಿದ್ದರು. ಇಂದು ಕೂಡ ದಂಪತಿಯ ನಡುವೆ ಮಾತಿಗೆ ಮಾತು ಬೆಳೆದಿತ್ತು. ಸ್ವಲ್ಪ ಸಮಯದ ಬಳಿಕ ಥೆನ್ನರಸು ತನ್ನ ರೂಮ್‌ಗೆ ಹೋಗಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
PublicNext
29/09/2020 04:47 pm