ಬೆಂಗಳೂರು: ಮಾದಕ ವಸ್ತು ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ ಜಾರಿ ಹಿನ್ನೆಲೆ ನಿರೂಪಕಿ ಅನುಶ್ರೀ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ನನಗೆ ಯಾವುದೇ ನೋಟಿಸ್ ಬಂದಿಲ್ಲ. ಯಾವ ನೋಟಿಸ್ ಎಂಬುವುದು ನನಗೆ ಗೊತ್ತಾಗುತ್ತಿಲ್ಲ. ಮೊಬೈಲಿಗೆ ಸಮನ್ಸ್ ಸಹ ಬಂದಿಲ್ಲ. ನಾನು, ಅಮ್ಮ ಮತ್ತು ತಮ್ಮ ಬೆಂಗಳೂರಿನಲ್ಲಿಯೇ ಇದ್ದೇನೆ. ಹೀಗಾಗಿ ಮಂಗಳೂರಿನ ಮನೆಯಲ್ಲಿಯೂ ನಾವು ಯಾರು ಇಲ್ಲ. ಸುದ್ದಿ ಪ್ರಸಾರವಾಗುತ್ತಿದ್ದಂತೆ ಮನೆಗೆ ಹೋಗಿ ಪರಿಶೀಲಿಸುವಂತೆ ಸಂಬಂಧಿಕರಿಗೆ ಹೇಳಿದೆ. ಅಲ್ಲಿಗೂ ಯಾವುದೇ ನೋಟಿಸ್ ಬಂದಿಲ್ಲ ಎಂದು ಅನುಶ್ರೀ ತಿಳಿಸಿದ್ದಾರೆ.
ಲಾಕ್‌ಡೌನ್ ವೇಳೆ ಇಪ್ಪತ್ತೈದು ದಿನ ಮಂಗಳೂರಿನಲ್ಲಿ ಲಾಕ್ ಆಗಿದ್ದೆ. ನಂತರ ಅನುಮತಿ ಪಡೆದು ಕಾರ್ ಡ್ರೈವ ಮಾಡಿಕೊಂಡು ಬಂದಿದ್ದೇನೆ. ಮಂಗಳೂರಿಗೆ ಹೋದ್ರು ಮನೆ ಮತ್ತು ದೇವಸ್ಥಾನಕ್ಕೆ ಮಾತ್ರ ಹೋಗುತ್ತೇನೆ. ಈ ಬಗ್ಗೆ ನೀವು ಯಾರನ್ನಾದರೂ ಕೇಳಿ. ಕಾರ್ಯಕ್ರಮಗಳಿಗೆ ಹೋಗುವುದು ನನ್ನ ಕೆಲಸ. ಆದ್ರೆ ಎಷ್ಟೋ ಜನರನ್ನು ಭೇಟಿ ಆಗುತ್ತಿರುತ್ತೇವೆ. ಅಲ್ಲಿ ಬಂದರೋರು ನಮಗೆ ಪರಿಚಯ ಇರಬೇಕು ಅಂತೇನಿಲ್ಲ ಎಂದು ಹೇಳಿದರು.
PublicNext
24/09/2020 05:57 pm