ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊರೊನಾ ಸೋಂಕಿನಿಂದ ಬಂಗಾಳದ ಖ್ಯಾತ ಹಿರಿಯ ನಟ ಸೌಮಿತ್ರ ಚಟರ್ಜಿ ವಿಧಿವಶ

ನವದೆಹಲಿ: ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಂಗಾಳ ಸಿನಿಮಾ ಬಹುಖ್ಯಾತ ಹಿರಿಯ ನಟ, ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಪುರಸ್ಕೃತ ಸೌಮಿತ್ರ ಚಟರ್ಜಿ (85) ಇಂದು ಬೆಳಗ್ಗೆ ಬೆಲ್ಲಿ ವ್ಯೂ ಕ್ಲಿನಿಕ್​ನಲ್ಲಿ ಮೃತಪಟ್ಟಿದ್ದಾರೆ.

ಚಟರ್ಜಿ ಅವರು ಆಸ್ಕರ್ ಪ್ರಶಸ್ತಿ ವಿಜೇತ ನಿರ್ದೇಶಕ ಸತ್ಯಜಿತ್ ರೇ ಅವರೊಂದಿಗೆ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಚಟರ್ಜಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಅಕ್ಟೋಬರ್ 5ರಂದು ಪರೀಕ್ಷೆಯಲ್ಲಿ ತಿಳಿದುಬಂದಿತ್ತು. ಜೊತೆಗೆ ಇತರೆ ಅಸ್ವಸ್ತತೆ ಸಮಸ್ಯೆ ಅವರಿಗಿತ್ತು. ಬಳಿಕ ಅಕ್ಟೋಬರ್ 9ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ವಿಧಿವಶರಾಗಿದ್ದಾರೆ.

Edited By : Vijay Kumar
PublicNext

PublicNext

15/11/2020 04:50 pm

Cinque Terre

65.64 K

Cinque Terre

2