ಬೆಂಗಳೂರಿನಲ್ಲಿ ಕಾರು, ಬಸ್ಸು ಬಿಟ್ಟು ಸೈಕಲ್‌ನಲ್ಲಿ ಓಡಾಡಿದ್ರೆ ಆರೋಗ್ಯಕ್ಕೆ ಒಳ್ಳೆಯದು. ಯಾಕಂದ್ರೆ ವಾಯುಮಾಲಿನ್ಯವೂ ನಿಯಂತ್ರಣಕ್ಕೆ ಬರುತ್ತೆ ಎಂದು ಕನ್ನಡ ಸಿನಿ ನಿರ್ದೇಶಕ ಹಾಗೂ ನಟ ಪ್ರೇಮ್ ಹೇಳಿದ್ದಾರೆ.
ಕರ್ನಾಟಕ ಸರ್ಕಾರ ಸಾರಿಗೆ ಇಲಾಖೆಯಿಂದ 'ವಾಯುಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ನವೆಂಬರ್ 2020' ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಅತಿಥಿಯಾಗಿದ್ದ ಪ್ರೇಮ್ ವಾಯುಮಾಲಿನ್ಯ ನಿಯಂತ್ರಿಸಲು ಸ್ವತಃ ಸಾರ್ವಜನಿಕರೇ ತಿಳಿದುಕೊಳ್ಳಬೇಕು ಎಂದಿದ್ದಾರೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕಾಲ್ನಡಿಗೆ ಜಾಥಾದಲ್ಲಿ 'ವಾಯುಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ'ಗೆ ಸಾರಿಗೆ ಸಚಿವ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಚಾಲನೆ ನೀಡಿದರು.
ಬಳಿಕ ವೇದಿಕೆಯಲ್ಲಿ ಮಾತನಾಡಿದ ನಿರ್ದೇಶಕ ಪ್ರೇಮ್ ''ಬೆಂಗಳೂರಿನಲ್ಲಿ ಹೆಚ್ಚು ಹೆಚ್ಚು ಗಿಡಗಳನ್ನು ನೆಡಬೇಕು. ಬಿಬಿಎಂಪಿ ಇಲಾಖೆ ಹಾಗು ಆಯುಕ್ತರು ಈ ಬಗ್ಗೆ ಗಮನ ನೀಡಬೇಕು'' ಎಂದು ಮನವಿ ಮಾಡಿಕೊಂಡರು.
PublicNext
18/11/2020 07:12 pm