ಮುಂಬೈ: ಡ್ರಗ್ಸ್ ಪ್ರಕರಣದ ಸಂಬಂಧ ಹಾಸ್ಯನಟಿ ಭಾರತಿ ಸಿಂಗ್ ಅವರ ಪತಿ ಹರ್ಷ್ ಲಿಂಬಾಚಿಯಾ ಅವರನ್ನು ಮಾದಕವಸ್ತು ನಿಯಂತ್ರಣ ದಳದ (ಎನ್‌ಸಿಬಿ) ಭಾನುವಾರ ಬಂಧಿಸಿದೆ.
ಎನ್‌ಸಿಬಿ ಅಧಿಕಾರಿಗಳು ಶನಿವಾರವಷ್ಟೇ ಹಾಸ್ಯನಟಿ ಭಾರ್ತಿ ಸಿಂಗ್ ಮತ್ತು ಅವರ ಪತಿ ಹರ್ಷ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದರು. ಈ ವೇಳೆ 86.5 ಗ್ರಾಂ ಮಾದಕ ವಸ್ತು ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಭಾರ್ತಿ ಸಿಂಗ್ ಅವರನ್ನು ಬಂಧಿಸಲಾಗಿತ್ತು. ಜೊತೆಗೆ ಹರ್ಷ್ ಅವರನ್ನು ವಿಚಾರಣೆಗೆ ಒಳಪಡಿಸಿ ಇಂದು ಬಂಧಿಸಿದ್ದಾರೆ. ಇಬ್ಬರನ್ನು ಸದ್ಯ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಗಿದೆ.
ಪೆಡ್ಲರ್‌ರೊಬ್ಬರ ವಿಚಾರಣೆ ವೇಳೆ ಭಾರ್ತಿ ಸಿಂಗ್ ಅವರ ಹೆಸರು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಅವರ ನಿರ್ಮಾಣ ಕಚೇರಿ ಮತ್ತು ನಿವಾಸದ ಮೇಲೆ ದಾಳಿ ನಡೆಸಿದ್ದರು. ಭಾರತಿ ಮತ್ತು ಅವರ ಪತಿ ಇಬ್ಬರೂ ಗಾಂಜಾ ಸೇವನೆಯನ್ನು ಒಪ್ಪಿಕೊಂಡಿದ್ದಾರೆ ಎಂದು ಎನ್‌ಸಿಬಿ ಹೇಳಿಕೆಯಲ್ಲಿ ತಿಳಿಸಿದೆ.
PublicNext
22/11/2020 10:07 am