ಬೆಂಗಳೂರು: ಡ್ರಗ್ಸ್ ಕೇಸ್‌ನಲ್ಲಿ ಸ್ಯಾಂಡಲ್‌ವುಡ್ ನಟಿ ರಾಗಿಣಿ ದ್ವಿವೇದಿ ಜೈಲು ಸೇರಿ ಮೂರು ತಿಂಗಳಾಗಿದೆ. ಆದರೆ ಅವರು ಯಾವಾಗ ಪರಪ್ಪನ ಅಗ್ರಹಾರದಿಂದ ಮನೆಗೆ ವಾಪಸ್ ಬರುತ್ತಾರೆ ಎಂಬುದು ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ.
ರಾಗಿಣಿ, ಸಂಜನಾ ಮತ್ತು ಪ್ರಶಾಂತ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಎನ್‌ಡಿಪಿಎಸ್ ವಿಶೇಷ ಕೋರ್ಟ್ ಸೆ.28ರಂದು ತಿರಸ್ಕರಿಸಿತ್ತು. ಬಳಿಕ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಕೂಡ ಜಾಮೀನು ಅರ್ಜಿ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
PublicNext
30/11/2020 05:48 pm