ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರೈತರ ಹೋರಾಟಕ್ಕೆ ಪ್ರಿಯಾಂಕಾ ಚೋಪ್ರಾ ಬೆಂಬಲ

ನವದೆಹಲಿ: ರೈತರ ಹೋರಾಟಕ್ಕೆ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಬೆಂಬಲ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ರೈತರನ್ನು ಆಹಾರದ ಸೈನಿಕರು ಎಂದಿದ್ದಾರೆ. ಕೆಂದ್ರದ ಹೊಸ ಕೃಷಿ ಕಾನೂನುಗಳ ಬಗ್ಗೆ ಇರುವ ಕಳವಳವನ್ನು ತುರ್ತಾಗಿ ಪರಿಹರಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪ್ರಿಯಾಂಕ್ರಾ ಚೋಪ್ರಾ ಮನವಿ ಮಾಡಿದ್ದಾರೆ.

ಪ್ರಿಯಾಂಕಾ ಚೋಪ್ರಾ ಅವರು ಭಾನುವಾರ ರೈತರ ಪ್ರತಿಭಟನೆಯ ಸಂಬಂಧ ತಮ್ಮ ಟ್ವೀಟ್ ನಲ್ಲಿ ಹಂಚಿಕೊಂಡರು. ಗಾಯಕ-ನಟ ದಿಲ್ಜಿತ್ ದೋಸಾಂಜ್ ಅವರ ಟ್ವೀಟ್ ಅನ್ನು ಅನುಮೋದಿಸಿದರು ಮತ್ತು ಕೇಂದ್ರದ ಹೊಸ ಕೃಷಿ ಕಾನೂನುಗಳ ಬಗ್ಗೆ ತಮ್ಮ ಕಳವಳವನ್ನು ತುರ್ತಾಗಿ ಪರಿಹರಿಸಬೇಕೆಂದು ಎಂದು ತಿಳಿಸಿದ್ದಾರೆ.

ಗಾಯಕ-ನಟ ದಿಲ್ಜಿತ್ ದೋಸಾಂಜ್ ಅವರ ಟ್ವೀಟ್ ಅನ್ನು ಅನುಮೋದಿಸಿ ಪ್ರಿಯಾಂಕಾ ಚೋಪ್ರಾ ” ನಮ್ಮ ರೈತರು ಭಾರತದ ಆಹಾರ ಸೈನಿಕರು. ಅವರ ಭಯವನ್ನು ಹೋಗಲಾಡಿಸಬೇಕಾಗಿದೆ. ಅವರ ಬೇಡಿಕೆಗಳನ್ನು ಈಡೇರಿಸಬೇಕಾಗಿದೆ. ಈ ಬಿಕ್ಕಟ್ಟನ್ನು ಶೀಘ್ರದಲ್ಲೇ ಬಗೆಹರಿಸುವುದನ್ನು ರೈತರಿಗೆ ಖಚಿತ ಪಡಿಸಬೇಕು ಎಂದು ಉಲ್ಲೇಖಿಸಿ ಪ್ರಿಯಾಂಕಾ ಟ್ವೀಟ್ ಮಾಡಿದ್ದಾರೆ.

Edited By : Nagaraj Tulugeri
PublicNext

PublicNext

07/12/2020 11:38 am

Cinque Terre

81.66 K

Cinque Terre

11