ಇಸ್ಲಾಮಾಬಾದ್: ಪಾಕಿಸ್ತಾನದ ನಟಿ ಮಹಿರಾ ಖಾನ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ಕುರಿತು ಇನ್‌ಸ್ಟಾಗ್ರಾಮ್ ಮೂಲಕ ಮಾಹಿತಿ ನೀಡಿರುವ ನಟಿ ಮಹಿರಾ, ''ನನಗೆ ಕೋವಿಡ್-೧೯ ಸೋಂಕು ತಗುಲಿರುವುದು ದೃಢಪಟ್ಟಿದೆ. ನಾನು ಸದ್ಯ ಪ್ರತ್ಯೇಕವಾಗಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕದಲ್ಲಿದ್ದ ಎಲ್ಲರೂ ಜಾಗೃತವಾಗಿರಬೇಕು. ಶೀಘ್ರದಲ್ಲೇ ಚೇತರಿಸಿಕೊಳ್ಳುತ್ತೇನೆ. ಇನ್ಶಲ್ಲಾ" ಎಂದು ಬರೆದುಕೊಂಡಿದ್ದಾರೆ.
ಎಲ್ಲರೂ ಮಾಸ್ಕ್ ಧರಿಸಿ ಮನೆಯಿಂದ ಹೊರ ಬನ್ನಿ. ಕೊರೊನಾ ನಿಯಮಗಳನ್ನು ಪಾಲಿಸಿ ಎಂದು ಮಹಿರಾ ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.
PublicNext
13/12/2020 04:17 pm