ಮುಂಬೈ: ಬಾಲಿವುಡ್ ನಟ ಸೈಫ್ ಅಲಿಖಾನ್ ಪತ್ನಿ, ನಟಿ ಕರೀನಾ ಕಪೂರ್ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಸದ್ಯ ಕರೀನಾ ಬೇಬಿ ಬಂಪ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಕರೀನಾ ಕಪೂರ್ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಅಭಿಮಾನಿಗಳಿಗೆ ಮಾಹಿತಿ ನೀಡುತ್ತಲೇ ಇರುತ್ತಾರೆ. ಖಾಸಗಿ ಕಂಪನಿಯ ಜಾಹೀರಾತಿನ ಶೂಟಿಂಗ್ ತೊಡಗಿಕೊಂಡಿರುವ ಕರೀನಾ ಕಪೂರ್, ನಾವಿಬ್ಬರು ಚಿತ್ರೀಕರಣದ ಸೆಟ್‌ನಲ್ಲಿದ್ದೇವೆ ಎಂದು ಬರೆದು ಬೇಬಿ ಬಂಪ್ ಫೋಟೋ ಅಪ್ಲೋಡ್ ಮಾಡಿಕೊಂಡಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳು ಮೆಚ್ಚುಗೆ ಸೂಚಿಸಿ ಆರೋಗ್ಯದ ಬಗ್ಗೆ ನಿಗಾ ಇರಲಿ ಎಂದು ಸಲಹೆ ನೀಡುತ್ತಿದ್ದಾರೆ.
PublicNext
14/12/2020 06:27 pm