ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಡಲ ದಡದಲ್ಲಿ ಕ್ಯೂಟ್ ಕಪಲ್ ದಿಗ್ಗಿ-ಆ್ಯಂಡಿ ಮೋಜು ಮಸ್ತಿ

ಸ್ಯಾಂಡಲ್ ವುಡ್ ಕ್ಯೂಟ್ ಕಪಲ್ ದಿಗಂತ್ ಮತ್ತು ಐಂದ್ರಿತಾ ರೇ ದಂಪತಿ ಸದ್ಯ ಪ್ರವಾಸದಲ್ಲಿ ಬ್ಯುಸಿಯಾಗಿದ್ದಾರೆ. ಸಾಲು ಸಾಲು ಸಿನಿಮಾಗಳನ್ನು ಕೈಯಲ್ಲಿಟ್ಟುಕೊಂಡಿರುವ ದಿಗಂತ್ ಚಿತ್ರೀಕರಣದ ನಡುವೆಯೂ ಪತ್ನಿಯ ಜೊತೆ ಪ್ರವಾಸ ಎಂಜಾಯ್ ಮಾಡುತ್ತಿದ್ದಾರೆ. ದಿಗಂತ್ ಮತ್ತ ಐಂದ್ರಿತಾ ಸದ್ಯ ಮಂಗಳೂರಿನಲ್ಲಿ ಬೀಡುಬಿಟ್ಟಿದ್ದಾರೆ. ಇತ್ತೀಚಿಗಷ್ಟೆ ದಿಗಂತ್ ದಂಪತಿ ಎರಡನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ವಾರ್ಷಿಕೋತ್ಸವದ ಸಂಭ್ರಮಾಚರಣೆಗೆ ವಿದೇಶಕ್ಕೆ ಹೋಗುವ ಪ್ಲಾನ್ ಕೈಬಿಟ್ಟು, ಕರ್ನಾಟಕದ ಸುಂದರ ಪ್ರದೇಶಗಳಲ್ಲಿ ಸಖತ್ ಎಂಜಾಯ್ ಮಾಡುತ್ತಿದ್ದಾರೆ.

ದಿಗಂತ್ ದಂಪತಿಯ ಸಾಹಸ ಕ್ಷಣಗಳ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಂದಹಾಗೆ ದೂದ್ ಪೇಡ ದಂಪತಿ ಸದ್ಯ' ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ', ಸಿನಿಮಾದಲ್ಲಿ ನಟಿಸುತ್ತಿದ್ದಾರೆ. 8 ವರ್ಷಗಳ ಬಳಿಕ ಈ ಜೋಡಿ ಒಟ್ಟಿಗೆ ತೆರೆಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ.

Edited By : Nagaraj Tulugeri
PublicNext

PublicNext

15/12/2020 04:39 pm

Cinque Terre

35.97 K

Cinque Terre

1