ಕನ್ನಡದಲ್ಲಿ ಹಲವು ಯಶಸ್ವಿ ಚಿತ್ರಗಳನ್ನು ನೀಡಿರುವ ದಿನೇಶ್ ಬಾಬು ಅವರ ನಿರ್ದೇಶನದ ಕಸ್ತೂರಿ ಮಹಲ್ ಚಿತ್ರಕ್ಕೆ ಬಾಲಾಜಿ ಡಿಜಿಟಲ್ ಸ್ಟುಡಿಯೋದಲ್ಲಿ (ಸಂಭಾಷಣೆ) ಮಾತಿನ ಜೋಡಣೆ ನಡೆಯುತ್ತಿದೆ.
ಈಗಾಗಲೇ ಚಿತ್ರೀಕರಣ ಹಾಗೂ ಸಂಕಲನ ಮುಕ್ತಾಯವಾಗಿದ್ದು, ಸದ್ಯದಲ್ಲೇ ಪ್ರಥಮ ಪ್ರತಿ ತಯಾರಿಯೂ ನಡೆದಿದೆ.
ಪ್ರಾಕೃತಿಕ ಸೌಂದರ್ಯದ ಕೊಟ್ಟಿಗೆ ಹಾರ, ಬಾಲೂರು ಸುತ್ತ ಮುತ್ತಲಿನ ಸುಂದರ ಪರಿಸರದಲ್ಲಿ ಸಿನಿಮಾ ಚಿತ್ರೀಕರಣ ನಡೆದಿದೆ.
ಬಹುಭಾಷಾ ನಟಿ ಶಾನ್ವಿ ಶ್ರೀವಾಸ್ತವ್ ನಾಯಕಿಯಾಗಿ ನಟಿಸಿರುವ ಈ ಚಿತ್ರದ ತಾರಾ ಬಳಗದಲ್ಲಿ ಸ್ಕಂಧ ಅಶೋಕ್, ರಂಗಾಯಣ ರಘು, ಶೃತಿ ಪ್ರಕಾಶ್, ಕಾಶಿಮ ರಫಿ, ನೀನಾಸಂ ಅಶ್ವಥ್, ಅಕ್ಷರ್ ಮುಂತಾದ ಕಲಾವಿದರಿದ್ದಾರೆ.
ಹಾರಾರ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ದಿನೇಶ್ ಬಾಬು ಅವರು ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ.
ಇದು ಅವರ ನಿರ್ದೇಶನದ 50ನೇ ಚಿತ್ರ ಆಗಿರುವುದು ಸಹ ವಿಶೇಷ.
ಶ್ರೀ ಭವಾನಿ ಆರ್ಟ್ಸ್ ಲಾಂಛನದಲ್ಲಿ ರವೀಶ್ ಆರ್.ಸಿ ನಿರ್ಮಿಸಿರುವ ಈ ಚಿತ್ರಕ್ಕೆ ನವೀನ್ ಆರ್.ಸಿ ಮತ್ತು ಅಕ್ಷಯ್ ಸಿ.ಎಸ್ ಅವರ ಸಹ ನಿರ್ಮಾಣವಿದೆ.
ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ ಹಾಗೂ ಹರೀಶ್ ಕೃಷ್ಣ ಅವರ ಸಂಕಲನ ಕಸ್ತೂರಿ ಮಹಲ್ ಸಿನಿಮಾಗಿದೆ.
PublicNext
16/12/2020 12:35 pm