ಬೆಂಗಳೂರು: ಸ್ಯಾಂಡಲ್‌ವುಡ್ ಡ್ರಗ್ ಜಾಲ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ ಅನಾರೋಗ್ಯ ಕಾರಣ ನೀಡಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಉಸಿರಾಟ ಹಾಗೂ ಹೊಟ್ಟೆನೋವು ಸಮಸ್ಯೆಯಿಂದ ಬಳಲುತ್ತಿದ್ದ ರಾಗಿಣಿ ಜೈಲು ಆರೋಗ್ಯಾಧಿಕಾರಿಗಳ ಶಿಫಾರಸಿನ ಮೇರೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಡ್ರಗ್ ಜಾಲ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ರಾಗಣಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿತ್ತು. ಡ್ರಗ್ ಜಾಲ ಪ್ರಕರಣದ ಪ್ರಮುಖ ಆರೋಪಿಗಳಾದ ಶಿವಪ್ರಕಾಶ್ ಮತ್ತು ಇತರರು ಬಂಧನವಾಗದ ಹಿನ್ನೆಲೆಯಲ್ಲಿ ಜಾಮೀನು ನೀಡಿರಲಿಲ್ಲ. ಜಾಮೀನು ಕೋರಿ ರಾಗಿಣಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.
PublicNext
24/12/2020 12:42 pm