ಸ್ಯಾಂಡಲ್‌ವುಡ್ ಖ್ಯಾತ ನಟ ರಮೇಶ್ ಅರವಿಂದ್ ಮನೆಯಲ್ಲಿ ಮದುವೆ ಸಂಭ್ರಮ ಕಳೆಗಟ್ಟಿದೆ. ರಮೇಶ್ ಹಾಗೂ ಅರ್ಚನಾ ದಂಪತಿಯ ಪುತ್ರಿ ನಿಹಾರಿಕಾ ಅವರ ವಿವಾಹ ನಿಶ್ಚಯವಾಗಿದೆ.
ನಿಹಾರಿಕಾ ವಿವಾಹವು ಅಕ್ಷಯ್ ಅವರೊಂದಿಗೆ ಡಿಸೆಂಬರ್ 28ರಂದು ನಡೆಯಲಿದೆ. ನಿಹಾರಿಕಾ ಹಾಗೂ ಅಕ್ಷಯ್ ಒಂದೇ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಈಗ ನವಜೀವನಕ್ಕೆ ಕಾಲಿಡಲಿದ್ದಾರೆ.
ವಿವಾಹ ಮಹೋತ್ಸವ ಕಾರ್ಯಕ್ರಮವು ಎರಡು ಕುಟುಂಬಗಳ ಸದಸ್ಯರ ಸಮ್ಮುಖದಲ್ಲಿ ಕೋವಿಡ್–19 ನಿಯಮಾನುಸಾರ ನಡೆಯಲಿದೆ. ಜನವರಿ ಎರಡನೇ ವಾರದಲ್ಲಿ ಆರತಕ್ಷತೆ ಆಯೋಜಿಸಲಾಗಿದ್ದು, ಅಂದು ಚಿತ್ರರಂಗ ಸೇರಿದಂತೆ ಎಲ್ಲಾ ಕ್ಷೇತ್ರಗಳ ಗಣ್ಯರನ್ನು ಆಹ್ವಾನಿಸಲಾಗುತ್ತಿದೆ.
ಈ ಕುರಿತು ಮಾತನಾಡಿರುವ ರಮೇಶ್ ಅರವಿಂದ್, ‘ನಾನು ಚಿತ್ರರಂಗಕ್ಕೆ ಬಂದ ದಿನದಿಂದಲೂ ಕರ್ನಾಟಕದ ಜನತೆ, ಚಿತ್ರರಸಿಕರು ಹಾಗೂ ಮಾಧ್ಯಮದವರು ನೀಡಿರುವ ಪ್ರೋತ್ಸಾಹ ಅಷ್ಟಿಷ್ಟಲ್ಲ. ನಿಮ್ಮ ಪ್ರೀತಿಯ ಆಶೀರ್ವಾದ ಮದುಮಕ್ಕಳ ಮೇಲೆ ಸದಾ ಇರಲಿ’ ಎಂದು ಮನವಿ ಮಾಡಿದ್ದಾರೆ.
PublicNext
25/12/2020 07:50 am