ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಜನಿಕಾಂತ್ ಹೈದರಾಬಾದ್ ಆಸ್ಪತ್ರೆಗೆ ದಾಖಲು

ಹೈದರಾಬಾದ್‌: ರಕ್ತದೊತ್ತಡದಲ್ಲಿ ತೀವ್ರ ಏರಿಳಿತದ ಕಾರಣ ತಮಿಳು ಸೂಪರ್‌ಸ್ಟಾರ್ ರಜನಿಕಾಂತ್ ಅವರನ್ನು ಶುಕ್ರವಾರ ಬೆಳಿಗ್ಗೆ ಹೈದರಾಬಾದ್‌ನ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೈದರಾಬಾದ್‌ನ ಅಪೊಲೊ ಆಸ್ಪತ್ರೆಯ ವೈದ್ಯರು ರಜನಿಕಾಂತ್ ಅವರ ಆರೋಗ್ಯದ ಮೇಲೆ ನಿಗಾ ಇಟ್ಟಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆಸ್ಪತ್ರೆಯ ಅಧಿಕಾರಿಗಳು, "ರಜನಿಕಾಂತ್ ಅವರನ್ನು ಇಂದು (ಡಿಸೆಂಬರ್ 25) ಬೆಳಿಗ್ಗೆ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಕಳೆದ 10 ದಿನಗಳಿಂದ ಅವರು ಹೈದರಾಬಾದ್‌ನಲ್ಲಿ ಚಲನಚಿತ್ರವೊಂದರ ಚಿತ್ರೀಕರಣದಲ್ಲಿದ್ದರು. ಸೆಟ್‌ನಲ್ಲಿ ಇಬ್ಬರಿಗೆ ಕೋವಿಡ್ -19ಗೆ ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ರಜನಿಕಾಂತ್ ಅವರಿಗೆ ಡಿಸೆಂಬರ್ 22ರಂದು ಕೊರೊನಾ ಟೆಸ್ಟ್ ಮಾಡಲಾಗಿತ್ತು. ವರದಿಯಲ್ಲಿ ನೆಗೆಟಿವ್ ಬಂದಿದ್ದು, ಅಂದಿನಿಂದ ಅವರು ಪ್ರತ್ಯೇಕಿದ್ದರು'' ಎಂದು ತಿಳಿಸಿದ್ದಾರೆ.

Edited By : Vijay Kumar
PublicNext

PublicNext

25/12/2020 02:05 pm

Cinque Terre

82.22 K

Cinque Terre

6