ಕಪಿಲ್ ದೇವ್ ಜೀವನಾಧಾರಿತ 83 ಸಿನಿಮಾದ ಬಿಡಗಡೆಗೆ ದಿನಗಣನೆ ಶುರುವಾಗಿದ್ದು, ನಾಳೆ ಡಿ.24 ರಂದು ವಿಶ್ವದಾದ್ಯಂತ 5 ಭಾಷೆಗಳಲ್ಲಿ ಏಕಕಾಲದಲ್ಲಿ ತೆರೆಕಾಣಲಿದೆ.
ಸಿನಿ ಪ್ರೇಮಿಗಳಲ್ಲಿ ಸಾಕಷ್ಟು ಕುತೂಹಲ ಹುಟ್ಟಿಸಿರುವ ಚಿತ್ರ 1983ರಲ್ಲಿ ಕ್ರಿಕೆಟ್ ವರ್ಲ್ಡ್ ಕಪ್ ಟೂರ್ನಮೆಂಟ್ ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ 43 ರನ್ ಗಳ ಭರ್ಜರಿ ಜಯ ಸಾಧಿಸಿ ವಿಶ್ವಕಪ್ ಟ್ರೋಫಿಯನ್ನ ಎತ್ತಿಹಿಡಿಯಿತು. ಅಂದಿನ ಟೀಂ ಇಂಡಿಯಾ ಕ್ಯಾಪ್ಟನ್ ಕಪಿಲ್ ದೇವ್ ಆಗಿದ್ದವರು.
ಸದ್ಯ ಚಿತ್ರ ‘83’ ಚಿತ್ರದಲ್ಲಿ ಕಪಿಲ್ ದೇವ್ ಪಾತ್ರದಲ್ಲಿ ರಣ್ವೀರ್ ಸಿಂಗ್ ಅಭಿನಯಿಸಿದ್ದಾರೆ. ಇನ್ನು ಚಿತ್ರದ ಪ್ರೀಮಿಯರ್ ಶೋ ಅನ್ನು ಬುಧವಾರ ರಾತ್ರಿ ಮುಂಬೈನಲ್ಲಿ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ನಟ ರಣವೀರ್ ಸಿಂಗ್ ಮತ್ತು ಮಾಜಿ ಕ್ರಿಕೆಟಿಗ ಕಪಿಲ್ ದೇವ್ ವೇದಿಕೆಯಲ್ಲೇ ಪರಸ್ಪರ ಆಲಂಗಿಸಿ ಚುಂಬಿಸಿದ್ದಾರೆ. ಸದ್ಯ ಈ ಕಿಸ್ಸಿಂಗ್ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ವೈರಲ್ ಆಗಿದೆ.
ಮಹಾಮಾರಿ ಕೋವಿಡ್ ಕಾಲಘಟ್ಟದಲ್ಲಿ ಸಿನಿ ತಾರೆಯರು ಸೋಂಕಿನ ಬಗ್ಗೆ ಜಾಗೃತಿ ಮೂಡಿಸಬೇಕು. ಆದರೆ ಕೇವಲ ಒಂದು ಚಿತ್ರಕ್ಕಾಗಿ ಕೋಟ್ಯಾಂತರ ಅಭಿಮಾನಿಗಳ ಮುಂದೆ ಹೀಗೆ ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ ಪರಸ್ಪರ ಚುಂಬಿಸಿಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ ಎನ್ನುವುದು ಹಲವರ ಪ್ರಶ್ನೆ.
ಇನ್ನು ಸಿನಿಮಾ ನಾಯಕ ನಟ, ನಟಿಯರನ್ನು ಅನೇಕರು ಅವರ ಎಲ್ಲ ಚಟುವಟಿಕೆಗಳನ್ನು ಗಮನಿಸುತ್ತಿರುತ್ತಾರೆ. ಅದೆಷ್ಟೋ ಬಾರಿ ಅವರಂತೆಯೇ ನಡೆದುಕೊಳ್ಳುತ್ತಾರೆ. ಅವರನ್ನು ಅನುಕರಣೆ ಮಾಡುತ್ತಾರೆ ಹಾಗಾಗಿ ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ವರ್ತಿಸಿರುವುದನ್ನು ಅನೇಕರು ಖಂಡಿಸಿದ್ದಾರೆ.
ಅಷ್ಟಕ್ಕೂ ಈ ಮಾಜಿ ಕ್ರಿಕೆಟರ್ಸ್ ಗಳು ಹೀಗೆ ಪ್ರೊಮೋಟ್ ಮಾಡಲು 15 ಕೋಟಿ ಸಂಭಾವನೆ ಪಡೆದಿದ್ದಾರಂತೆ..
PublicNext
23/12/2021 05:10 pm