ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎಸ್‍ಪಿಬಿ ನಿಧನದಿಂದ ಸಾಂಸ್ಕೃತಿಕ ಲೋಕ ತುಂಬಾ ಬಡವಾಗಿದೆ- ಪ್ರಧಾನಿ ಮೋದಿ

ನವದೆಹಲಿ: ಖ್ಯಾತ ಬಹುಭಾಷಾ ಗಾಯಕ, ನಟ ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಸೇರಿದಂತೆ ದೇಶದ ಗಣ್ಯಾತಿ ಗಣ್ಯರು ಸಂತಾಪ ಸೂಚಿಸಿ ಕಂಬನಿ ಮಿಡಿದಿದ್ದಾರೆ.

ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, "ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ನಿಧನದಿಂದಾಗಿ ನಮ್ಮ ಸಾಂಸ್ಕೃತಿಕ ಲೋಕ ತುಂಬಾ ಬಡವಾಗಿದೆ. ಭಾರತದಾದ್ಯಂತ ಪ್ರತಿ ಮನೆಯಲ್ಲಿಯೂ ಅವರ ಹೆಸರು, ಸುಮಧುರ ಧ್ವನಿ ಹಾಗೂ ಸಂಗೀತ ದಶಕಗಳಿಂದ ಪ್ರೇಕ್ಷರನ್ನು ಮೋಡಿ ಮಾಡಿತ್ತು. ಈ ದುಃಖದ ಸಂದರ್ಭದಲ್ಲಿ ಅವರ ಕುಟುಂಬ ಹಾಗೂ ಅಭಿಮಾನಿಗಳೊಂದಿಗೆ ನನ್ನ ಸಂದೇಶವಿದೆ. ಓಂ ಶಾಂತಿ" ಎಂದು ಕಂಬನಿ ಮಿಡಿದಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿ, ಲೆಜೆಂಡರಿ ಸಂಗೀತಗಾರ ಹಾಗೂ ಹಿನ್ನೆಲೆ ಗಾಯಕ ಪದ್ಮ ಭೂಷಣ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಸಾವು ತುಂಬಾ ನೋವುಂಟು ಮಾಡಿದೆ. ಅವರ ಕುಟುಂಬ ಹಾಗೂ ಅಭಿಮಾನಿಗಳೊಂದಿಗೆ ಸಂತಾಪ ಸೂಚಿಸುತ್ತೇನೆ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.

ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಟ್ವೀಟ್ ಮಾಡಿ, ಸಂಗೀತ ದಂತಕಥೆ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಅತ್ಯಂತ ಸುಮಧುರ ಧ್ವನಿಯನ್ನು ಕಳೆದುಕೊಂಡಿದ್ದೇವೆ. ಸಹಸ್ರ ಅಭಿಮಾನಿಗಳು ಅವರನ್ನು ‘ಹಾಡುವ ಚಂದ್ರ’ ಎಂದೇ ಕರೆದಯುತ್ತಿದ್ದರು. ಪದ್ಮ ಭೂಷಣ ಸೇರಿ ಹಲವು ಪ್ರಶಸ್ತಿಗಳು ಅವರಿಗೆ ಲಭಿಸಿವೆ. ಅವರ ಕುಟುಂಬಸ್ಥರು, ಸ್ನೇಹಿತರು ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.

Edited By : Vijay Kumar
PublicNext

PublicNext

25/09/2020 04:14 pm

Cinque Terre

131.77 K

Cinque Terre

2