ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ವಾಟ್ಸಪ್ ಡ್ರಗ್ಸ್ ಗ್ರೂಪ್‌ಗೆ ದೀಪಿಕಾ ಅಡ್ಮಿನ್'

ಮುಂಬೈ: ಡ್ರಗ್ಸ್ ಕುರಿತು ಚಾಟ್ ಮಾಡುತ್ತಿದ್ದ ವಾಟ್ಸಪ್ ಗ್ರೂಪ್‌ಗೆ ಬಾಲಿವುಡ್‌ ನಟಿ ದೀಪಾಕಾ ಪಡುಕೋಣೆ ಅಡ್ಮಿನ್ ಆಗಿದ್ದರು ಎಂದು ಎನ್‍ಸಿಬಿ ಮೂಲಗಳು ತಿಳಿಸಿವೆ.

ಬಾಲಿವುಡ್‌ ಯುವ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವಾಗಲೇ ಡ್ರಗ್ಸ್ ದಂಧೆ ಕುರಿತು ಸ್ಫೋಟಕ ಮಾಹಿತಿ ಲಭ್ಯವಾಗುತ್ತಿದೆ. ಈಗಾಗಲೇ ಸುಶಾಂತ್ ಸಿಂಗ್ ರಜಪೂತ್ ಪ್ರಿಯತಮೆ, ನಟಿ ರಿಯಾ ಚಕ್ರವರ್ತಿ ಹಾಗೂ ಇತರ ಡ್ರಗ್ ಪೆಡ್ಲರ್‍ಗಳನ್ನು ವಿಚಾರಣೆ ನಡೆಸುತ್ತಿದ್ದಾಗ ಬಾಲಿವುಡ್‌ನ ಹಲವು ನಟ, ನಟಿಯರು ಹಾಗೂ ನಿರ್ಮಾಪಕರು ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿರುವ ಕುರಿತು ಮಾಹಿತಿ ಲಭ್ಯವಾಗುತ್ತಿದೆ.

ಡ್ರಗ್ಸ್ ಕುರಿತ ಮೂವರಿದ್ದ ಗ್ರೂಪ್‌ಗೆ ದೀಪಿಕಾ ಪಡುಕೋಣೆ ಅವರೇ ಅಡ್ಮಿನ್ ಆಗಿದ್ದರು ಎಂದು ತಿಳಿದು ಬಂದಿದೆ. ಈ ವಾಟ್ಸಪ್ ಗ್ರೂಪ್‌ನಲ್ಲಿ ನಟಿಯ ಮ್ಯಾನೇಜರ್ ಕರಿಷ್ಮಾ ಪ್ರಕಾಶ್, ಜಯಾ ಸಾಹ ಅವರೂ ಭಾಗಿಯಾಗಿದ್ದಾರೆ. ಈ ಕುರಿತು ಎನ್‍ಸಿಬಿ ಈಗಾಗಲೇ ಕರಿಷ್ಮಾ ಅವರ ವಿಚಾರಣೆ ನಡೆಸಿದೆ. ದೀಪಿಕಾ ಅವರು ಶನಿವಾರ ವಿಚಾರಣೆಗೆ ಹಾಜರಾಗಲಿದ್ದಾರೆ.

Edited By : Vijay Kumar
PublicNext

PublicNext

25/09/2020 08:09 pm

Cinque Terre

111.53 K

Cinque Terre

0