ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ಮೈಸೂರು ವಿ.ವಿ.ಯಿಂದ ಅಪ್ಪುಗೆ ಗೌರವ ಡಾಕ್ಟರೇಟ್ ಘೋಷಣೆ

ಮೈಸೂರು: ಸ್ಯಾಂಡಲ್‌ವುಡ್‌ನ ಪವರ್‌ ಸ್ಟಾರ್‌, ದಿವಂಗತ ಪುನೀತ್ ರಾಜ್‌ಕುಮಾರ್‌ ಅವರಿಗೆ ದೇಶದ ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ ಒಂದಾಗಿರುವ ಮೈಸೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಘೋಷಿಸಿದೆ.

ಈ ಕುರಿತು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಹೇಮಂತ್ ಕುಮಾರ್ ಘೋಷಣೆ ಮಾಡಿದ್ದಾರೆ. ವಿಶೇಷವೆಂದರೆ 46 ವರ್ಷದ ಹಿಂದೆ ವರನಟ ಡಾ.ರಾಜ್​ಕುಮಾರ್ ಅವರಿಗೂ ಮೈಸೂರು ವಿ.ವಿ ಗೌರವ ಡಾಕ್ಟರೇಟ್ ನೀಡಿತ್ತು. ಮಾರ್ಚ್ 22ರಂದು ವಿವಿಯ 102ನೇ ಘಟಿಕೋತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ ಅಪ್ಪುಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ ಮಾಡುತ್ತಾರೆ ಎಂದು ಮಾಹಿತಿ ನೀಡಲಾಗಿದೆ.

Edited By : Vijay Kumar
PublicNext

PublicNext

13/03/2022 02:34 pm

Cinque Terre

197.76 K

Cinque Terre

11