ಚೆನ್ನೈ: ತಂದೆಯ ಸಾವಿನ ನಂತರ ಬಾಕಿ ಹಣ ಸ್ವೀಕರಿಸಲು ಆಸ್ಪತ್ರೆ ನಿರಾಕರಿಸಿದೆ ಎಂದು ಎಸ್‌ಪಿ ಬಾಲಸುಪ್ರಬ್ರಹ್ಮಣ್ಯಂ ಅವರ ಪುತ್ರ ಎಸ್‌ಪಿ ಚರಣ್ ಹೇಳಿದ್ದಾರೆ.
ಬಾಲಸುಬ್ರಮಣ್ಯಂ ಅವರ ಸಾವಿನ ನಂತರ ಬಾಕಿ ಉಳಿದಿದ್ದ ಆಸ್ಪತ್ರೆಯ ಚಿಕಿತ್ಸಾ ವೆಚ್ಚವನ್ನು ಭರಿಸಲು ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಮುಂದಾಗಿದ್ದರು ಎಂಬ ವದಂತಿಗಳನ್ನು ಎಸ್‌ಪಿ ಚರಣ್ ತಳ್ಳಿಹಾಕಿದ್ದಾರೆ. ಬದಲಾಗಿ, ಬಾಕಿ ಬಿಲ್ ಅನ್ನು ಆಸ್ಪತ್ರೆಯೇ ಸ್ವೀಕರಿಸುತ್ತಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಎಂಜಿಎಂ ಆಸ್ಪತ್ರೆಯ ವೈದ್ಯರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಚರಣ್ ಅವರು, ನನ್ನ ತಂದೆಯ ಮರಣದ ನಂತರ ಇನ್ನು ಎಷ್ಟು ಹಣ ಪಾವತಿಸಬೇಕು ಎಂದು ಆಸ್ಪತ್ರೆಯ ಸಿಬ್ಬಂದಿಯನ್ನು ಕೇಳಿದ್ದೆ. ಆದರೆ ಆಸ್ಪತ್ರೆಯ ಅಧಿಕಾರಿಗಳು ಯಾವುದೇ ಬಾಕಿ ಬಿಲ್ ಸ್ವೀಕರಿಸಲು ನಿರಾಕರಿಸಿದರು. ನಾವು ವಾರಕ್ಕೆ ಒಮ್ಮೆ ಆಸ್ಪತ್ರೆಯ ಬಿಲ್ ಅನ್ನು ಪಾವತಿಸುತ್ತಿದ್ದೇವೆ. ಚಿಕಿತ್ಸಾ ವೆಚ್ಚದ ಒಂದು ಭಾಗವನ್ನು ವಿಮೆಯಿಂದ ಪಡೆದುಕೊಳ್ಳಲಾಗಿದೆ ಎಂದು ತಿಳಿಸಿದರು.
PublicNext
28/09/2020 07:26 pm