ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಟ ಪುನೀತ್ ರಾಜಕುಮಾರ್ ಗೆ ಮರಣೋತ್ತರ ಬಸವಶ್ರೀ ಪ್ರಶಸ್ತಿ

ಚಿತ್ರದುರ್ಗ: ಚಿತ್ರದುರ್ಗ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರು ನಟ ಪುನೀತ್ ರಾಜಕುಮಾರ್ ಗೆ ಮರಣೋತ್ತರ ಬಸವಶ್ರೀ ಪ್ರಶಸ್ತಿ ಘೋಷಿಸಿದ್ದಾರೆ. ಪ್ರಶಸ್ತಿಯು 5 ಲಕ್ಷ ರೂ. ನಗದು ಮತ್ತು ಫಲಕ ಒಳಗೊಂಡಿದೆ. ಬಸವ ಜಯಂತಿಯಂದು ಪುನೀತ್ ಪತ್ನಿ ಅಶ್ವಿನಿ ಗೆ ಪ್ರದಾನ ಮಾಡಲಾಗುತ್ತದೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದ ಡಾ. ಶಿವಮೂರ್ತಿ ಮುರುಘಾ ಶರಣರು. ಬಾಲನಟನಾಗಿ, ನಾಯಕ ನಟನಾಗಿ, ಹಿನ್ನೆಲೆ ಗಾಯಕರಾಗಿ, ನಿರ್ಮಾಪಕರಾಗಿ ಕನ್ನಡ ಚಿತ್ರರಂಗಕ್ಕೆ ಅವರು ಅಪಾರ ಕೊಡುಗೆ ನೀಡಿದ್ದಾರೆ. ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ರಾಯಭಾರಿಯಾಗಿ, ಸಾಮಾಜಿಕ ಜಾಗೃತಿ ಪ್ರಚಾರಕರಾಗಿಯೂ ಸಮಾಜ ಸೇವೆ ಸಲ್ಲಿಸಿದ್ದಾರೆ.

ಇಂತಹ ಮೇರುನಟ ಇತ್ತೀಚೆಗೆ ಹೃದಯಾಘಾತದಿಂದ ನಮ್ಮನ್ನು ಅಗಲಿರುವುದು ಕೋಟ್ಯಂತರ ಅಭಿಮಾನಿಗಳಿಗೆ ನೋವನ್ನುಂಟು ಮಾಡಿದೆ. ಅವರ ಕುಟುಂಬದವರು ನೋವನ್ನು ಸಹಿಸಿಕೊಳ್ಳಲು ಬಸವಾದಿ ಪ್ರಮಥರ ಆಶೀರ್ವಾದ ಸದಾ ಇರಲಿ ಎಂದಿದ್ದಾರೆ.

Edited By : Nirmala Aralikatti
PublicNext

PublicNext

04/11/2021 03:27 pm

Cinque Terre

52.53 K

Cinque Terre

10