ದುಬೈನಲ್ಲಿ ಸಂಗೀತ ಸಂಜೆ ಕಾರ್ಯಕ್ರಮದಲ್ಲಿದ್ದ ಖ್ಯಾತ ಗಾಯಕ ರಘು ದೀಕ್ಷಿತ್ ಗೆ ಇಂದು ಶಾಕ್ ಆಗಿದೆ. ಹೌದು ಮ್ಯೂಸಿಕ್ ಡೈರೆಕ್ಟರ್ ಮತ್ತು ಸಿಂಗರ್ ರಘು ದೀಕ್ಷಿತ್ ತಾಯಿ ಇಂದು ನಿಧನರಾಗಿದ್ದಾರೆ.
ಇನ್ನು ವಿಷಯ ತಿಳಿಯುತ್ತಿದ್ದಂತೆ ಕಾರ್ಯಕ್ರಮ ಮೊಟಕುಗೊಳಿಸಿ ಭಾರತಕ್ಕೆ ಆಗಮಿಸಿದ್ದಾರೆ. ಕೆಲ ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
PublicNext
24/02/2022 08:32 pm