ಬೆಂಗಳೂರು: ಕೆಜಿಎಫ್ ಸೇರಿದಂತೆ ಅನೇಕ ಹಿಟ್ ಸಿನಿಮಾಗಳನ್ನು ನೀಡಿರುವ ಕನ್ನಡದ ಯಶಸ್ವಿ ನಿರ್ದೇಶಕ ಪ್ರಶಾಂತ್ ನೀಲ್ ಅವರು ಹುಟ್ಟೂರಿನಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ 50 ಲಕ್ಷ ರೂ. ದೇಣಿಗೆ ನೀಡಿದ್ದಾರೆ.
ಆಂಧ್ರ ಪ್ರದೇಶದ ಅನಂತಪುರಂ ಜಿಲ್ಲೆಯ ಮಡಕಶಿರಾ ವಿಧಾನಸಭಾ ಕ್ಷೇತ್ರದ ನೀಲಕಂಠಪುರಂ ಗ್ರಾಮದಲ್ಲಿ ಕಣ್ಣಿನ ಆಸ್ಪತ್ರೆ ನಿರ್ಮಿಸಲಾಗುತ್ತಿದೆ. ಈ ಆಸ್ಪತ್ರೆ ನಿರ್ಮಾಣಕ್ಕೆ ಪ್ರಶಾಂತ್ ನೀಲ್ 50 ಲಕ್ಷ ರೂ ದೇಣಿಗೆ ನೀಡಿದ್ದಾರೆ.
ಈ ಕುರಿತು ನೀಲ್ ಅವರ ಸಂಬಂಧಿ ಹಾಗೂ ಮಾಜಿ ಸಚಿವ ರಘುವೀರ್ ರೆಡ್ಡಿ ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ವಿಶೇಷವೆಂದರೆ ಪ್ರಶಾಂತ್ ನೀಲ್ ಅವರ ತಂದೆಯ ಜನ್ಮದಿನ ಆಗಸ್ಟ್ 15ರಂದೇ ಇದೆ. ತಂದೆಯ 76ನೇ ಹುಟ್ಟು ಹಬ್ಬದ ಹಿನ್ನೆಲೆ ಪ್ರಶಾಂತ್ ನೀಲ್ ಅವರು ಈ ಭಾರಿ ಮೊತ್ತದ ದೇಣಿಗೆ ನೀಡಿದ್ದಾರೆ.
PublicNext
16/08/2022 05:24 pm