ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರೇಮಕವಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು

ಬೆಳಗಾವಿ : ಚಂದನವನದ ಪ್ರೇಮಕವಿ, ಹೆಸರಾಂತ ಚಿತ್ರಸಾಹಿತಿ ಕೆ. ಕಲ್ಯಾಣ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಕೌಟುಂಬಿಕ ಕಲಹ ಇದೀಗ ಕಲಹ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

ಬೆಳಗಾವಿಯ ಅಶೋಕ ನಗರದಲ್ಲಿ ವಾಸವಾಗಿರುವ ಅಶ್ವಿನಿ ಸೆಪ್ಟಂಬರ್ 30ರಂದು ಕಿಡ್ನಾಪ್ ಆಗಿದ್ದಾರೆ ಎಂದು ಮಾಳಮಾರುತಿ ಠಾಣೆಯಲ್ಲಿ ಕೆ. ಕಲ್ಯಾಣ ದೂರು ನೀಡಿದ್ದರು. ಈ ಸಂಬಂಧ ಎಫ್‌ಐಆರ್ ಕೂಡ ದಾಖಲಾಗಿತ್ತು. ಇತ್ತ ದೂರು ಸ್ವೀಕರಿಸಿದ ಪೊಲೀಸರು ಕೆ.ಕಲ್ಯಾಣ ಪತ್ನಿ ಅಶ್ವಿನಿ ಅವರನ್ನು ಕರೆತಂದಿದ್ದಾರೆ. ಅಲ್ಲದೆ ಬೆಳಗಾವಿಯ ಮಾಳಮಾರುತಿ ಠಾಣೆಯಲ್ಲಿ ಅಶ್ವಿನಿ ಅವರಿಂದ ಪೊಲೀಸರು ಮಾಹಿತಿಯನ್ನು ಪಡೆಯುತ್ತಿದ್ದಾರೆ.

ಕೆ. ಕಲ್ಯಾಣ ದೂರಿನ ಮೇರೆಗೆ ಮಾಳಮಾರುತಿ ಠಾಣೆ ಪೊಲೀಸರು ಕಲ್ಯಾಣ ಪತ್ನಿ ಅಶ್ವಿನಿ ಅವರನ್ನು ಠಾಣೆಗೆ ಕರೆತಂದಿದ್ದಾರೆ. ಪ್ರಕರಣ ಕುರಿತು ಮಾಳಮಾರುತಿ ಠಾಣೆಯಲ್ಲಿ ಪೊಲೀಸರು ಅಶ್ವಿನಿಯಿಂದ ಮಾಹಿತಿ ಪಡೆಯುತ್ತಿದ್ದಾರೆ. ಆದರೆ ನಾನು ಅಪಹರಣ ಆಗಿಲ್ಲ. ದಾಂಪತ್ಯ ಕಲಹದ ಹಿನ್ನೆಲೆಯಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಲಾಗಿದೆ ಎಂದು ಅಶ್ವಿನಿ ಪರ ವಕೀಲ ಸತೀಶ್ ದಳವಾಯಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಅಶ್ವಿನಿ ಕಾಣೆಯಾಗಿಲ್ಲ. ಪೊಲೀಸರ ಸೂಚನೆ ಮೇರೆಗೆ ಅಶ್ವಿನಿ ಅವರು ಬೆಳಗಾವಿಯ ಮಾಳಮಾರುತಿ ಠಾಣೆಗೆ ಆಗಮಿಸಿದ್ದಾರೆ. ಪತಿಯಾಗಿ ಕೆ. ಕಲ್ಯಾಣ ಅವರು 14 ವರ್ಷಗಳಿಂದ ತಮ್ಮ ಜವಾಬ್ದಾರಿ ನಿಭಾಯಿಸಿಲ್ಲ. ಅಲ್ಲದೇ ಅಶ್ವಿನಿಗೆ ನಿತ್ಯ ಮಾನಸಿಕ ಹಿಂಸೆ ನೀಡುತ್ತಿದ್ದರು. ಇದರಿಂದ ರೋಸಿ ಹೋಗಿ ಜೂನ್ 26 ರಂದು ಬೆಳಗಾವಿಯ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಜನರನ್ನು ದಾರಿ ತಪ್ಪಿಸಲು ಕೆ. ಕಲ್ಯಾಣ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ ಎಂದಿದ್ದಾರೆ.

Edited By : Vijay Kumar
PublicNext

PublicNext

03/10/2020 08:14 pm

Cinque Terre

47.95 K

Cinque Terre

2