ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಇನ್ನೂ ಟಾಲಿವುಡ್ ನಟರಾದ ಜೂನಿಯರ್ ಎನ್‍ಟಿಆರ್ ಮತ್ತು ಸೂಪರ್ ಸ್ಟಾರ್ ಮಹೇಶ್ ಬಾಬು ಬೆನ್ನಲ್ಲೇ ನಟ ಚಿರಂಜೀವಿ ಮತ್ತು ಅವರ ಪುತ್ರ ರಾಮ್ ಚರಣ್ ತೇಜ ಸಂತ್ರಸ್ತರಿಗೆ ಸಹಾಯ ಹಸ್ತಚಾಚಿದ್ದಾರೆ.
ನಟ ಚಿರಂಜೀವಿ ಮತ್ತು ಅವರ ಪುತ್ರ ರಾಮ್ ಚರಣ್ ತೇಜ ಅವರು ಆಂಧ್ರಪ್ರದೇಶ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಲಾ 25 ಲಕ್ಷ ರೂ. ನೀಡುವುದಾಗಿ ಟ್ವೀಟ್ ಮೂಲಕ ತಿಳಿಸಿದ್ದಾರೆ. "ಆಂಧ್ರಪ್ರದೇಶದಲ್ಲಿ ಪ್ರವಾಹ ಮತ್ತು ಧಾರಾಕಾರ ಮಳೆಯಿಂದಾಗಿ ವ್ಯಾಪಕವಾಗಿ ಹಾನಿಯುಂಟಾಗಿರುವ ವಿಚಾರ ಬಹಳ ನೋವು ತಂದಿದೆ. ಪ್ರವಾಹದಿಂದ ಉಂಟಾದ ವ್ಯಾಪಕ ವಿನಾಶ ಮತ್ತು ಹಾನಿಯಿಂದ ನನಗೆ ನೋವಾಗಿದೆ. ಸಂತ್ರಸ್ತರಿಗೆ ಸಹಾಯ ಮಾಡಲು ಮುಖ್ಯಮಂತ್ರಿ ಪರಿಹಾರ ನಿಧಿಗೆ ರೂ.25 ಲಕ್ಷ ರೂ. ಕೊಡುಗೆ ನೀಡುತ್ತಿದ್ದೇನೆ" ಎಂದು ಚಿರಂಜೀವಿ ಟ್ವೀಟ್ ಮಾಡಿದ್ದಾರೆ.
ಮತ್ತೊಂದೆಡೆ ರಾಮ್‍ಚರಣ್ ತೇಜ ಅವರು, ಭಯಾನಕ ಪ್ರವಾಹದಿಂದಾಗಿ ಆಂಧ್ರಪ್ರದೇಶದ ಜನತೆ ಅನುಭವಿಸುತ್ತಿರುವ ಕಷ್ಟವನ್ನು ನೋಡಲು ಹೃದಯ ಭಾರವೆನಿಸುತ್ತಿದೆ. ಜನರಿಗೆ ಸಹಾಯ ಮಾಡಲು ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಲಕ್ಷ ರೂಪಾಯಿಯ ನನ್ನದೊಂದು ಪುಟ್ಟ ಕಾಣಿಕೆ ನೀಡುತ್ತಿದ್ದೇನೆ ಎಂದು ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.
PublicNext
02/12/2021 03:21 pm