ಖ್ಯಾತ ತೆಲುಗು ನಟ, ರಾಜಕಾರಣಿ ಪವನ್ ಕಲ್ಯಾಣ್ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿದ್ರು. ಇದೇ ವೇಳೆ ಅವರು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಪೂಜೆ, ಆದಿ ಸುಬ್ರಹ್ಮಣ್ಯದ ಹುತ್ತಕ್ಕೆ ವಸ್ತ್ರ ಸಮರ್ಪಿಸಿದರು. ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ಸುಳ್ಳಿಯಿಂದ ಗೌರವಾರ್ಪಣೆ ಸಲ್ಲಿಸಲಾಯಿತು. ಪ್ರತಿ ಏಕಾದಶಿಯಂದು ದೇವಸ್ಥಾನದಲ್ಲಿ ನಡೆಸುವ ಸ್ವಚ್ಛತಾ ಕಾರ್ಯಕ್ರಮಕ್ಕೆ ಪವನ್ ಕಲ್ಯಾಣ್ ಮೆಚ್ಚುಗೆ ವ್ಯಕ್ತಪಡಿಸಿದರು. ಎಲ್ಲಾ ದೇವಸ್ಥಾನಗಳೂ ಕುಕ್ಕೆ ಸುಬ್ರಹ್ಮಣ್ಯವನ್ನು ಅನುಸರಿಸಬೇಕೆಂದು ಪವನ್ ಮನವಿ ಮಾಡಿದರು. ಇದರಿಂದ ಪರಿಸರ ಸ್ವಚ್ಛತಾ ಜಾಗೃತಿ ಸಾಧ್ಯ ಎಂದರು.
PublicNext
29/03/2022 05:01 pm