ಬೆಂಗಳೂರು : ಸ್ಯಾಂಡಲ್‌ವುಡ್‌ನ ಹಿರಿಯ ನಟ ಉದಯ್ ಹುತ್ತಿನಗದ್ದೆ (62) ಉಸಿರಾಟದ ಸಮಸ್ಯೆಯಿಂದ ಗುರುವಾರ ಸಂಜೆ ತಮ್ಮ ಮನೆಯಲ್ಲಿ ನಿಧನರಾಗಿದ್ದಾರೆ.
1987 ರಲ್ಲಿ ಬಿಡುಗಡೆಯಾದ ಆರಂಭ ಸಿನಿಮಾದ ಮೂಲಕ ನಾಯಕನಾಗಿ ಕನ್ನಡ ಚಿತ್ರ ರಂಗಕ್ಕೆ ಎಂಟ್ರಿ ಕೊಟ್ಟ ಅವರು ಶಿವಯೋಗಿ ಅಕ್ಕಮಹಾದೇವಿ, ಅಮೃತ ಬಿಂದು, ಉದ್ಭವ, ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಉಂಡು ಹೋದ ಕೊಂಡೂ ಹೋದ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದರು. ನಟನೆಯಿಂದ ದೂರ ಉಳಿದ ಅವರು, ಆನಂದರಾವ್ ವೃತ್ತದ ಬಳಿಕ ಕಲರ್ ಲ್ಯಾಬ್ ನಡೆಸುತ್ತಿದ್ದರು. ಗುರುವಾರ ಸಂಜೆ ಉಸಿರಾಟದ ಸಮಸ್ಯೆಯಿಂದಾಗಿ ತಮ್ಮ ಮನೆಯಲ್ಲೇ ಮೃತಪಟ್ಟಿದ್ದಾರೆ. ಉದಯ್ ಹುತ್ತಿನಗತ್ತೆ ಅವರ ಅಂತಿಮ ಸಂಸ್ಕಾರ ಇಂದು ಮಧ್ಯಾಹ್ನ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
PublicNext
03/06/2022 09:28 am