ಬೆಂಗಳೂರು: ಡ್ರಗ್ಸ್ ಜಾಲದ ನಂಟು ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ನಾಳೆಯಿಂದ ಜೈಲಿನಲ್ಲಿಯೇ ವಿಚಾರಣೆ ನಡೆಸಲು ಜಾರಿ ನಿರ್ದೇಶನಾಲಯ ನ್ಯಾಯಲಯದ ಅನುಮತಿ ಪಡೆದುಕೊಂಡಿದೆ.
ಬೆಂಗಳೂರಿನ ಎನ್‌ಡಿಪಿಎಸ್ ವಿಶೇಷ ನ್ಯಾಯಾಲಯಕ್ಕೆ ಜಾರಿ ನಿರ್ದೇಶನಾಲಯವು ರಾಗಿಣಿ ಹಾಗೂ ಸಂಜನಾ ವಿಚಾರಣೆಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಿತ್ತು. ಸದ್ಯ ಐದು ದಿನಗಳ ಕಾಲ ಇಡಿ ಅಧಿಕಾರಿಗಳು ಜೈಲಿನಲ್ಲಿ ವಿಚಾರಣೆಗೆ ಕೋರ್ಟ್ ಅನುಮತಿ ನೀಡಿದೆ. ನಾಳೆಯಿಂದ ಒಟ್ಟು ಐದು ದಿನ ಇಡಿ ನಟಿಯರನ್ನು ವಿಚಾರಣೆಗೆ ಒಳಪಡಿಸಲಿದೆ. ರವಿಶಂಕರ್, ವೀರೇನ್ ಖನ್ನಾ, ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ.
PublicNext
24/09/2020 07:36 pm