ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೀಫ್ ಅಂದ್ರೆ ತುಂಬಾ ಇಷ್ಟ ಎಂದಿದ್ದ ರಣ್ಬೀರ್; ಮಹಾಕಾಳೇಶ್ವರ ದೇವಸ್ಥಾನಕ್ಕೆ ನೋ ಎಂಟ್ರಿ ಎಂದ ಭಜರಂಗದಳ

ರಣ್ಬೀರ್ ಕಪೂರ್ ಮತ್ತು ಆಲಿಯಾ ಭಟ್ ಜೋಡಿಯ ಬ್ರಹ್ಮಾಸ್ತ್ರ ಸಿನಿಮಾ ಇನ್ನಷ್ಟೇ ಬಿಡುಗಡೆ ಆಗಬೇಕಿದೆ. ಹಾಗಾಗಿ ಅವರು ಪ್ರಚಾರದಲ್ಲಿ ತೊಡಗಿದ್ದಾರೆ. ಸದ್ಯ ಮಧ್ಯ ಪ್ರದೇಶದಲ್ಲಿರುವ ಈ ಜೋಡಿ ಅಲ್ಲಿನ ಸುಪ್ರಸಿದ್ಧ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲು ಬಂದ ಸಂದರ್ಭದಲ್ಲಿ ದೇವಸ್ಥಾನ ಪ್ರವೇಶಿಸದಂತೆ ಅಲ್ಲಿನ ಭಜರಂಗ ದಳದ ಕಾರ್ಯಕರ್ತರು ತಡೆದಿದ್ದಾರೆ.

ರಣ್ಬೀರ್ ಕಪೂರ್ ಮತ್ತು ಆಲಿಯಾ ಭಟ್ ಸಾಂಪ್ರದಾಯಿಕ ಬಟ್ಟೆಯಲ್ಲೇ ದೇವಸ್ಥಾನಕ್ಕೆ ಬಂದಿದ್ದಾರೆ. ದೇವಸ್ಥಾನದ ಶಿಷ್ಟಾಚಾರಗಳನ್ನೂ ಪಾಲಿಸಿದ್ದಾರೆ. ತಮಗೆ ಮತ್ತು ಸಿನಿಮಾಗೆ ಒಳ್ಳೆದಾಗಲಿ ಎಂದು ಪ್ರಾರ್ಥಿಸಲು ಬಂದ ಜೋಡಿಯನ್ನು ಭಜರಂಗ ದಳದ ಕಾರ್ಯಕರ್ತರು ತಡೆದಿರುವುದಕ್ಕೆ ಕಾರಣ, ರಣ್ಬೀರ್ ಕಪೂರ್ ಈ ಹಿಂದೆ ಹೇಳಿದ್ದ ಹೇಳಿಕೆ. ಹಲವು ವರ್ಷಗಳ ಹಿಂದೆ ಹೇಳಿದ್ದ ಆ ಹೇಳಿಕೆ ಇವತ್ತು ಅವರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

ಈ ಹಿಂದೆ ಸಂದರ್ಶನವೊಂದರಲ್ಲಿ ನಾನ್ ವೆಜ್ ಕುರಿತು ಮಾತನಾಡುತ್ತಾ, ತಮ್ಮದು ಮಾಂಸದೂಟ ಮಾಡುವ ಕುಟುಂಬ. ಅದರಲ್ಲೂ ನಾನಾ ರೀತಿಯ ಮಾಂಸದಡಿಗೆ ತಮ್ಮ ಮನೆಯಲ್ಲಿ ತಯಾರಾಗುತ್ತದೆ. ನನಗೆ ಬೀಫ್ ಅಂದರೆ ತುಂಬಾ ಇಷ್ಟ ಎಂದು ಹೇಳಿದ್ದರು. ಈ ಮಾತಿಗೆ ಇದೀಗ ಆಕ್ರೋಶ ವ್ಯಕ್ತವಾಗುತ್ತಿದೆ. ಹಿಂದೂಗಳು ದೇವರು ಎಂದು ಪೂಜಿಸುವ ಗೋವಿನ ಮಾಂಸವನ್ನು ತಿನ್ನುವ ರಣ್ಬೀರ್ ನಮ್ಮ ದೇವಸ್ಥಾನಗಳಿಗೆ ಬರುವುದು ಬೇಡವೆಂದು ಭಜರಂಗ ದಳದ ಕಾರ್ಯಕರ್ತರು ತಡೆದಿದ್ದಾರೆ.

ಸಡನ್ನಾಗಿ ನಡೆದ ಬೆಳವಣಿಗೆಯಿಂದ ಗಲಿಬಿಲಿಗೊಂಡ ರಣ್ಬೀರ್ ಮತ್ತು ಆಲಿಯಾ ಭಟ್, ಅದೆಷ್ಟೇ ಸಮಾಧಾನ ಹೇಳಿದರೂ ಕೇಳದ ಕಾರಣದಿಂದಾಗಿ ದೇವಸ್ಥಾನದಿಂದ ಅವರು ಹೊರಗುಳಿದಿದ್ದಾರೆ. ಕೇವಲ ನಿರ್ದೇಶಕ ಅಯಾನ್ ಮುಖರ್ಜಿ ಒಬ್ಬರೇ ದೇವಸ್ಥಾನದ ಒಳಗೆ ಪ್ರವೇಶಿಸಿ ದೇವರ ದರ್ಶನ ಪಡೆದಿದ್ದಾರೆ. ಮತ್ತು ಆ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಅವರು ಶೇರ್ ಮಾಡಿದ್ದಾರೆ.

Edited By : Abhishek Kamoji
PublicNext

PublicNext

07/09/2022 01:10 pm

Cinque Terre

36.38 K

Cinque Terre

4