ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಂಜನಾ ಲವ್ ಜಿಹಾದ್ ಕಹಾನಿಯ ಅಸಲಿ ಸತ್ಯ!

ಬೆಂಗಳೂರು: ಡ್ರಗ್ಸ್ ಜಾಲದ ನಂಟು ಪ್ರಕರಣದ ಬಳಿಕ ನಟಿ ಸಂಜನಾ ಗಲ್ರಾನಿ ಒಂದಿಲ್ಲೊಂದು ವಿಚಾರದಲ್ಲಿ ಸುದ್ದಿಯಾಗುತ್ತಿದ್ದಾರೆ. ಅವರಿಗೆ ಮದುವೆ ಆಗಿದೆಯೋ? ಇಲ್ಲವೋ? ಲವ್ ಜಿಹಾದ್​ಗೆ ಸಿಲುಕಿ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿದ್ದಾರೆಯೇ ಎಂಬ ಪ್ರಶ್ನೆಗಳು ಎದ್ದಿವೆ.

ಸಂಜನಾ ಲವ್ ಜಿಹಾದ್ ವಿಚಾರವಾಗಿ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಕೂಡ ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದಾರೆ. ಅಷ್ಟೇ ಅಲ್ಲದೆ ಸಂಜನಾ ತಮ್ಮ ಇನ್​ಸ್ಟಾಗ್ರಾಂನಲ್ಲಿ 2014ರ ಜು.7ರಂದು ಮುಸ್ಲಿಂ ಸಾಂಪ್ರದಾಯಿಕ ಉಡುಗೆ ಧರಿಸಿರುವ ಫೋಟೋ ಪೋಸ್ಟ್ ಮಾಡಿದ್ದರು. ಅದರ ಸ್ಕ್ರೀನ್ ಶಾರ್ಟ್‌ ಕೂಡ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದೆಲ್ಲದಕ್ಕೂ ಪುಷ್ಟಿ ಎಂಬಂತೆ ಪತ್ರವೊಂದು ವೈರಲ್ ಆಗಿದೆ.

ಪತ್ರದಲ್ಲಿ "ಮನೋಹರ್ ಗಲ್ರಾನಿ ಎಂಬುವರ ಮಗಳು ಅರ್ಚನಾ ಮನೋಹರ್ ಗಲ್ರಾನಿ 2018 ಅಕ್ಟೋಬರ್ 9ರಂದು ಇಸ್ಲಾಂ ಧರ್ಮಕ್ಕೆ ಮತಾಂತರವಾಗಿದ್ದು, ತಮ್ಮ ಹೆಸರನ್ನು ಮಹಿರಾ ಎಂದು ಬದಲಾಯಿಸಿಕೊಂಡಿದ್ದಾರೆ ಎಂದು ಉಲ್ಲೇಖವಾಗಿದೆ. ಜೊತೆಗೆ ನಟಿ ಸಂಜನಾ ಇಸ್ಲಾಂಗೆ ಮತಾಂತರವಾಗಿರುವುದು ನಿಜ ಎಂದು ಟ್ಯಾನರಿ ರಸ್ತೆಯಲ್ಲಿರುವ ದಾರುಲ್ ಉಲೂಮ್ ಶಾಹ್ ವಲಿಯುಲ್ಲಾ ಮದರಸಾ ಮುಖ್ಯಸ್ಥ ಮೌಲಾನಾ ಜೈನುಲ್ ಅಬ್ದೀನ್ ಸ್ಪಷ್ಟಪಡಿಸಿದ್ದಾರೆ.

Edited By : Vijay Kumar
PublicNext

PublicNext

20/09/2020 08:11 am

Cinque Terre

104.59 K

Cinque Terre

5