ಲಕ್ನೋ: ಉತ್ತರ ಪ್ರದೇಶದ ನೋಯ್ಡಾದಲ್ಲಿ ದೇಶದ ಅತ್ಯುನ್ನತ ಹಾಗೂ ಸುಂದರ ಫಿಲಂ ಸಿಟಿಯನ್ನು ನಿರ್ಮಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ ಮುಂದಾಗಿದೆ.
ಶುಕ್ರವಾರ ಅಭಿವೃದ್ಧಿ ಯೋಜನೆಗಳ ಪರಿಶೀಲನಾ ಸಭೆಯಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಅವರು, "ಗೌತಮ್ ಬುದ್ಧ ನಗರದಲ್ಲಿ ದೇಶದ ಅತಿದೊಡ್ಡ ಮತ್ತು ಸುಂದರವಾದ ಫಿಲಂ ಸಿಟಿಯನ್ನು ಸ್ಥಾಪಿಸಲಾಗುವುದು ಎಂದು ಘೋಷಿಸಿದ್ದಾರೆ. ಮೂಲಗಳ ಪ್ರಕಾರ, "ನೋಯ್ಡಾ, ಗ್ರೇಟರ್ ನೋಯ್ಡಾ ಅಥವಾ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಇಲ್ಲವೆ ಸುತ್ತಮುತ್ತಲಿನ ಪ್ರದೇಶದಲ್ಲಿ ಸೂಕ್ತವಾದ ಭೂಮಿಯನ್ನು ಹುಡುಕಲು ಮತ್ತು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
PublicNext
19/09/2020 03:28 pm