ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯಮ ನಿಷ್ಕರುಣಿ- ಎಸ್‌ಬಿಬಿ ನಿಧನಕ್ಕೆ ಕಂಬನಿ ಮಿಡಿದ ಡಿಕೆಸಿ

ಬೆಂಗಳೂರು: ಯಮ ನಿಷ್ಕರುಣಿ. ಹೀಗಾಗಿ ನಮ್ಮ ಪ್ರಾರ್ಥನೆ ಫಲಿಸಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಖ್ಯಾತ ಬಹುಭಾಷಾ ಗಾಯಕ, ನಟ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಎಸ್‌ಪಿಬಿ ನಿಧನದಕ್ಕೆ ಸಂತಾಪ ವ್ಯಕ್ತಪಡಿಸಿ ಟ್ವೀಟ್ ಮಾಡಿರುವ ಅವರು, 'ಗಾನ ಗಾರುಡಿಗ ಬಾಲಸುಬ್ರಹ್ಮಣ್ಯಂ ಅವರ ಅಗಲಿಕೆ ಸಂಗೀತ ಕ್ಷೇತ್ರಕ್ಕೆ ತುಂಬಲಾರದ ನಷ್ಟ. ಅವರ ಮುಂದಾಳತ್ವದಲ್ಲಿ ದೀರ್ಘಕಾಲ ಮೂಡಿಬಂದ 'ಎದೆ ತುಂಬಿ ಹಾಡುವೆನು' ಕಾರ್ಯಕ್ರಮವನ್ನು ವೀಕ್ಷಿಸುತಿದ್ದೆ. ಅವರ ಸರಳತೆ, ಸ್ಪರ್ಧಿಗಳನ್ನು ಹುರುದುಂಬಿಸುತ್ತಿದ್ದ ರೀತಿಗೆ ನಾನವರ ಅಭಿಮಾನಿಯಾಗಿದ್ದೆ. ಇಂತಹ ಮಹಾನ್ ಗಾಯಕನಿಗೆ ನನ್ನ ಭಾವಪೂರ್ಣ ವಿದಾಯಗಳು' ಎಂದು ಬರೆದುಕೊಂಡಿದ್ದಾರೆ.

ಇನ್ನು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಳೆದ ಮೂರು ದಿನಗಳಿಂದ ಒಂದಾದ ಮೇಲೊಂದರಂತೆ ಕೆಟ್ಟ ಸುದ್ದಿಗಳೇ ಬರುತ್ತಿರುವುದು ನೋವಿನ ವಿಚಾರ. ಎಸ್‌ಪಿಬಿ ಆರೋಗ್ಯದ ಬಗ್ಗೆ ಚಿಂತೆ ಇತ್ತು. ಲಕ್ಷಾಂತರ ಅಭಿಮಾನಿಗಳು ಅವರ ಚೇತರಿಕೆಗೆ ಪ್ರಾರ್ಥನೆ ಸಲ್ಲಿಸಿದ್ದರು. ಆದರೆ ಆ ಯಮ ನಿಷ್ಕರುಣಿ. ಹೀಗಾಗಿ ನಮ್ಮ ಪ್ರಾರ್ಥನೆ ಫಲಿಸಲಿಲ್ಲ' ಎಂದು ಕಂಬನಿ ಮಿಡಿದರು.

Edited By : Vijay Kumar
PublicNext

PublicNext

25/09/2020 02:59 pm

Cinque Terre

55.04 K

Cinque Terre

1