ಬೆಂಗಳೂರು: ಸಾಹಸಿಂಹ ವಿಷ್ಣುವರ್ಧನ್ ಅವರ ಬಗ್ಗೆ ತೆಲುಗು ನಟ ಮಾಡಿದ ಅಪಮಾನ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ದಾದಾ ಅಭಿಮಾನಿಗಳ ಮನ ನೋಯಿಸುವ ಮತ್ತೊಂದು ಘಟನೆ ನಡೆದಿದೆ.
ಮಾಗಡಿ ರಸ್ತೆಯ ಟೋಲ್ಗೇಟ್ ಬಳಿಯ ಡಾ. ವಿಷ್ಣುವರ್ಧನ್ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸ ಮಾಡಿ ವಿಕೃತಿ ಮೆರೆದಿದ್ದಾರೆ. ಮಾಗಡಿ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸಾರ್ವಜನಿಕರ ಹಾಗೂ ವಿಷ್ಣು ಅಭಿಮಾನಿಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿಂದೆ ಕಿಡಿಗೇಡಿಗಳು ಪ್ರತಿಮೆಯನ್ನೇ ಎತ್ತೊಯ್ದಿದ್ದರಂತೆ.
PublicNext
26/12/2020 11:42 am