ಹೈದರಾಬಾದ್: ಆಸ್ಪತ್ರೆಗೆ ದಾಖಲಾಗಿದ್ದ ನಟ ರಜನಿಕಾಂತ್ ಇವತ್ತು ಸಂಜೆ ಡಿಸ್ಚಾರ್ಜ್ ಆಗಲಿದ್ದಾರೆ. ಅಧಿಕ ರಕ್ತದೊತ್ತಡದ ಕಾರಣ ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಜನಿಕಾಂತ್ ಸಂಜೆ ಬಿಡುಗಡೆಯಾಗಲಿದ್ದಾರೆ.
ಅವರ ಸಹೋದರ ಸತ್ಯನಾರಾಯಣ ಅವರು ಮಾಹಿತಿ ನೀಡಿ, ರಜನಿಕಾಂತ್ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ. ರಜನಿ ಅಭಿಮಾನಿಗಳು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ಸಿನಿಮಾ ಶೂಟಿಂಗ್ ವೇಳೆ ಚಿತ್ರತಂಡದ ಕೆಲವರಿಗೆ ಕೊರೋನಾ ಸೋಂಕು ತಗುಲಿದ್ದ ಹಿನ್ನಲೆಯಲ್ಲಿ ಶೂಟಿಂಗ್ ಸ್ಥಗಿತಗೊಳಿಸಿ ರಜನಿಕಾಂತ್ ಕ್ವಾರಂಟೈನ್ ನಲ್ಲಿದ್ದರು. ಈ ವೇಳೆ ಅವರ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿದ್ದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು.
PublicNext
27/12/2020 10:01 am