ಚೆನ್ನೈ: ಸಿನಿಮಾ ಮಂದಿರಗಳಲ್ಲಿ ಸಿನಿಮಾಗಳ ಹೌಸ್‌ಫುಲ್ ಪ್ರದರ್ಶನಕ್ಕೆ ತಮಿಳುನಾಡು ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ.
ಕೋವಿಡ್-19 ಪ್ರೋಟೋಕಾಲ್‌ಗಳನ್ನು ಅನುಸರಿಸಿ ಚಿತ್ರಮಂದಿರ, ಮಲ್ಟಿಪ್ಲೆಕ್ಸ್‌ಗಳ ಆಸನ ಸಾಮರ್ಥ್ಯವನ್ನು ಈಗಿರುವ ಶೇ.50ರಿಂದ 100ಕ್ಕೆ ಹೆಚ್ಚಿಸಲು ತಮಿಳುನಾಡು ಸರ್ಕಾರ ಸೋಮವಾರ ಅನುಮತಿ ನೀಡಿದೆ. ಅಷ್ಟೇ ಅಲ್ಲದೆ ಪ್ರೇಕ್ಷಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಸಿನಿಮಾ ಪ್ರದರ್ಶನ ಸಮಯದಲ್ಲಿ ಕೊರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ಸಹ ಪ್ರದರ್ಶಿಸುವಂತೆ ಸರ್ಕಾರ ಸೂಚನೆ ನೀಡಿದೆ.
ಚಿತ್ರಮಂದಿರಗಳು ತಮ್ಮ ಸಂಪೂರ್ಣ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲು ಅವಕಾಶ ನೀಡುವಂತೆ ನಟರು ಮತ್ತು ನಾಟಕ ಮಾಲೀಕರು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಅವರಿಗೆ ಮನವಿ ಮಾಡಿಕೊಂಡಿದ್ದರು. ಇದಾದ ಕೆಲವೇ ದಿನಗಳ ನಂತರ ಈ ಆದೇಶ ಬಂದಿದೆ. ಕೋವಿಡ್-19 ಸುರಕ್ಷತಾ ಪ್ರೋಟೋಕಾಲ್ ಪ್ರಕಾರ, ಕಳೆದ ಅಕ್ಟೋಬರ್‌ನಿಂದ ರಾಜ್ಯದ ಚಿತ್ರಮಂದಿರಗಳು ಸಾಮಾಜಿಕ ಅಂತರವನ್ನು ಖಚಿತಪಡಿಸಿಕೊಳ್ಳಲು ತಮ್ಮ ಶೇ.50ರಷ್ಟು ಸೀಟುಗಳನ್ನು ಮಾತ್ರ ಭರ್ತಿ ಮಾಡಲು ಅವಕಾಶ ನೀಡಲಾಗಿತ್ತು. ಈಗ ತಮಿಳುನಾಡು ಸರ್ಕಾರ ಹೌಸ್‌ಫುಲ್ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿದೆ.
PublicNext
05/01/2021 12:39 pm