ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೆಜಿಎಫ್-2 ಟೀಸರ್ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಬೆಂಗಳೂರು: ಬಹುನಿರೀಕ್ಷಿತ ಚಿತ್ರ ಕೆಜಿಎಫ್-2 ಸಿನಿಮಾದ ಟೀಸರ್ ಬಿಡುಗಡೆಗೆ ಚಿತ್ರತಂಡ ಮೂಹೂರ್ತ ಫಿಕ್ಸ್‌ ಮಾಡಿದೆ.

ಈ ಕುರಿತು ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ನಿರ್ದೇಶಕ ಪ್ರಶಾಂತ್ ನೀಲ್, ಕೆಜಿಎಫ್-2 ಟೀಸರ್ ಬಿಡುಗಡೆಗೆ ಕೇವಲ 2 ದಿನ ಮಾತ್ರ ಬಾಕಿ ಇದೆ. ಜನವರಿ 8ರಂದು ಬೆಳಗ್ಗೆ 10:18ಕ್ಕೆ ಟೀಸರ್ ರಿಲೀಸ್ ಆಗಲಿದೆ. ಹೊಂಬಾಳೆ ಫಿಲ್ಮ್ಸ್ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

ಕೆಜಿಎಫ್ ಎರಡನೇ ಭಾಗ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸುತ್ತಿದೆ. ಈ ಮಧ್ಯೆ ಪ್ರಶಾಂತ್ ನೀಲ್ ಕೆಲ ದಿನದ ಹಿಂದಷ್ಟೇ ಹಳೆಯ ಪೇಪರ್ ಕಟಿಂಗ್ಸ್ ರೀತಿಯ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿಕೊಂಡಿದ್ದರು. ಈ ಮೂಲಕ ಕೆಜಿಎಫ್ ಮೊದಲ ಭಾಗದ ಸೂಪರ್ ರಾಕಿಂಗ್ ಡೈಲಾಗ್‌ಗಳನ್ನ ನೆನಪಿಸಿದ್ದರು.

Edited By : Vijay Kumar
PublicNext

PublicNext

06/01/2021 12:13 pm

Cinque Terre

54.49 K

Cinque Terre

0