ಮುಂಬೈ: ಕೊರೊನಾ ಲಾಕ್‌ಡೌನ್ ವೇಳೆ ಸಂಕಷ್ಟದಲ್ಲಿದ್ದ ಜನರ ನೆರವಿಗೆ ನಿಂತಿದ್ದ ಬಾಲಿವುಡ್ ನಟ ಸೋನು ಸೂದ್ ವಿರುದ್ಧ ಪ್ರಕರಣ ದಾಖಲಾಗಿದೆ.
ಅನುಮತಿ ಪಡೆಯದೆಯೇ ಕಟ್ಟಡವನ್ನು ಹೋಟೆಲ್ ಆಗಿ ಮಾರ್ಪಡಿಸಿದ ಹಿನ್ನೆಲೆಯಲ್ಲಿ ಸೋನು ಸೂದ್ ವಿರುದ್ಧ ಬೃಹನ್ಮುಂಬಯಿ ಮುನ್ಸಿಪಲ್ ಕಾರ್ಪೊರೇಶನ್(ಬಿಎಂಸಿ) ಪ್ರಕರಣ ದಾಖಲಿಸಿಕೊಂಡಿದೆ. ಜುಹುವಿನಲ್ಲಿ ಸೋನು ಸೂದ್ ಅವರಿಗೆ ಸೇರಿದ 6 ಮಹಡಿಯ ಕಟ್ಟಡವಿದ್ದು, ಈ ಕಟ್ಟಡವನ್ನು ಇತ್ತೀಚೆಗಷ್ಟೇ ಹೋಟೆಲ್ ಆಗಿ ಮಾರ್ಪಡಿಸಲಾಗಿತ್ತು. ಈ ಬಗ್ಗೆ ಬಿಎಂಸಿ ಜುಹು ಠಾಣೆಗೆ ದೂರು ನೀಡಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಎಂಸಿ ಅಧಿಕಾರಿಗಳು, ಅನುಮತಿ ಇಲ್ಲದೆಯೇ ಕಟ್ಟಡವನ್ನು ಹೋಟೆಲ್ ಆಗಿ ಮಾರ್ಪಡಿಸಲಾಗಿದ್ದು, ಈ ಕುರಿತು ಜುಹು ಠಾಣೆಗೆ ದೂರು ನೀಡಲಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
PublicNext
07/01/2021 02:18 pm