ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯ್ ರಾಘವೇಂದ್ರ ಅಭಿನಯದ 'ಸಾವಿತ್ರಿ' ಸಿನಿಮಾ ಚಿತ್ರೀಕರಣ ಮುಕ್ತಾಯ

ಸ್ಯಾಂಡಲ್‌ವುಡ್‌ ಪ್ರಸಿದ್ಧ ನಟಿ ತಾರಾ ಅವರು ಪ್ರಧಾನ ಪಾತ್ರದಲ್ಲಿ ಅಭಿನಯಿಸಿರುವ 'ಸಾವಿತ್ರಿ' ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. 45ಕ್ಕೂ ಹೆಚ್ಚು ದಿನಗಳ ಕಾಲ‌ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಪ್ರಸ್ತುತ ಸಂಕಲನ ಕಾರ್ಯ ಬಿರುಸಿನಿಂದ ಸಾಗಿದೆ.

ಪಿ.ಎನ್.ಪಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಪ್ರಶಾಂತ್ ಕುಮಾರ್ ಹೀಲಲಿಗೆ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಪ್ರಶಾಂತ್ ಕುಮಾರ್ ಮೂಲತಃ ಸಾಫ್ಟ್ ವೇರ್ ಉದ್ಯೋಗಿ, ಎಸ್.ದಿನೇಶ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ‌ ಮಾಡುತ್ತಿದ್ದಾರೆ. 'ಉಯ್ಯಾಲೆ' ನಂತರ ಇದು ನಿರ್ದೇಶಕರಿಗೆ ಎರಡನೇ ಚಿತ್ರ.

ಖ್ಯಾತ ಸಾಹಿತಿ ಹೃದಯ ಶಿವಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದು, ಗೀತರಚನೆ ಹಾಗೂ ಸಂಭಾಷಣೆ ಕೂಡ ಹೃದಯ ಶಿವ ಅವರದೆ. ಇಷ್ಟು ದಿನ ಗೀತರಚನೆಕಾರರಾಗಿದ್ದ ಹೃದಯ ಶಿವ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕರಾಗಿದ್ದಾರೆ. ನಾಗಾರ್ಜುನ.ಡಿ ಛಾಯಾಗ್ರಹಣ ಹಾಗೂ ಮನು ಅವರ ಸಂಕಲನ ಈ ಚಿತ್ರಕ್ಕಿದೆ.

ಕೌಟುಂಬಿಕ ಹಾಗೂ ಹಾರಾರ್ ಕಥಾಹಂದರ ಹೊಂದಿರುವ ಈ ಚಿತ್ರದ ನಾಯಕರಾಗಿ ವಿಜಯ ರಾಘವೇಂದ್ರ ಅಭಿನಯಿಸಿದ್ದಾರೆ. ಊರ್ವಶಿ ರೈ ಈ ಚಿತ್ರದ ನಾಯಕಿ.ಪ್ರಕಾಶ್ ಬೆಳವಾಡಿ, ಸಂಜು ಬಸಯ್ಯ (ಕಾಮಿಡಿ ಕಿಲಾಡಿಗಳು),‌ ಬೇಬಿ ನೈಲಾ ಪ್ರಮೋದ್, ಸ್ವಾತಿ, ಪುನೀತ್, ಮಾನ್ವಿಕ್, ಚಿನ್ಮಯ್, ಬೇಬಿ ಸಂಜನಾ ಹೃದಯಶಿವ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Edited By : Vijay Kumar
PublicNext

PublicNext

10/01/2021 03:13 pm

Cinque Terre

40.49 K

Cinque Terre

0

ಸಂಬಂಧಿತ ಸುದ್ದಿ