ಹೃತಿಕ್ ರೋಷನ್ ತಂದೆ ರಾಕೇಶ್ ರೋಷನ್ ನಿರ್ದೇಶನದ ‘ಕ್ರಿಶ್’ ಚಿತ್ರದಲ್ಲಿ ನಟಿಸಿದ್ದ ಹೃತಿಕ್ ಯಶಸ್ಸು ಕಂಡಿದ್ದಾರೆ. ಈಗ ಈ ಸರಣಿಯ ನಾಲ್ಕನೇ ಸಿನಿಮಾ ಬರಲಿದೆ ಎಂದು ಹೇಳಲಾಗುತ್ತಿದೆಯಾದರೂ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ. ಈ ಮಧ್ಯೆ ಬಾಲಿವುಡ್ ಅಂಗಳದಲ್ಲಿ ಹೊಸ ವಿಚಾರವೊಂದು ಹರಿದಾಡುತ್ತಿದೆ.
ವಾರ್ ನಿರ್ದೇಶಕ ಸಿದ್ಧಾರ್ಥ್ ಆನಂದ್ ಜೊತೆ ಹೃತಿಕ್ ಮತ್ತೊಮ್ಮೆ ಕೈಜೋಡಿಸುತ್ತಿದ್ದಾರೆ. ಈ ಚಿತ್ರ ಸಾಕಷ್ಟು ಆ್ಯಕ್ಷನಿಂದ ಕೂಡಿರಲಿದ್ದು, ಚಿತ್ರಕ್ಕೆ ಫೈಟರ್ ಎಂದು ಹೆಸರಿಡಲಾಗಿದೆ. ಇನ್ನು, ಚಿತ್ರದ ಹೀರೋಯಿನ್ ಆಗಿ ದೀಪಿಕಾ ಪಡುಕೋಣೆ ಬಣ್ಣ ಹಚ್ಚಲಿದ್ದಾರೆ ಎನ್ನಲಾಗಿದೆ. ಸಿದ್ಧಾರ್ಥ್ ಆನಂದ್ ಸದ್ಯ, ಶಾರುಖ್ ಖಾನ್ ನಟನೆಯ ‘ಪಠಾಣ್’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಹೀಗಾಗಿ, 2021 ಮಧ್ಯದ ವೇಳೆಗೆ ಹೊಸ ಸಿನಿಮಾದ ಕೆಲಸ ಆರಂಭ ಆಗಲಿದೆಯಂತೆ.
ಹೃತಿಕ್ ಹಾಗೂ ಟೈಗರ್ ಶ್ರಾಫ್ ಒಟ್ಟಾಗಿ ಕಾಣಿಸಿಕೊಂಡಿದ್ದ ವಾರ್ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಿತ್ತು. ಸಾಕಷ್ಟು ಆ್ಯಕ್ಷನ್ಗಳಿಂದ ಕೂಡಿದ್ದ ಈ ಚಿತ್ರಕ್ಕೆ ವಿಮರ್ಶಕರು ಹಾಗೂ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದುಕೊಂಡಿತ್ತು.
PublicNext
10/01/2021 07:09 pm