ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

40 ದಿನಗಳಲ್ಲಿ ಸೆನ್ಸಾರ್ ಪೂರ್ಣ ಮಾಡ್ತು ಮಕ್ಕಳ ತಂಟೆಗೆ ಬಂದ್ರೆ ಹುಷಾರ್ ಸಿನಿಮಾ

ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ವಿಭಿನ್ನ ಚಿತ್ರಗಳನ್ನು ನಿರ್ದೇಶಿಸಿದ ಕೋಡ್ಲು ರಾಮಕೃಷ್ಣ ಅವರ ನಿರ್ದೇಶನದ ಮತ್ತೊಂದು ಚಿತ್ರ "ಮಕ್ಕಳ ತಂಟೆಗೆ ಬಂದ್ರೆ ಹುಷಾರ್".

ಮಕ್ಕಳ ನಿತ್ಯ ಚಟುವಟಿಕೆ, ಪೋಷಕರ ಜೀವನ ಶೈಲಿ, ಮೊಬೈಲ್ ಗೀಳು ಹಾಗೂ ಶ್ರೀಮಂತ, ಮಧ್ಯಮ ಹಾಗೂ ಬಡವರ ಮನೆ ಮಕ್ಕಳು ಕೊರೊನ ಬರುವ ಮೊದಲು ಹಾಗೂ ನಂತರ ಹೇಗಿದ್ದಾರೆ ? ಎಂಬುವುದೆ ಈ ಚಿತ್ರದ ಕಥಾಸಾರಾಂಶ.‌

ಚಿತ್ರೀಕರಣ ಆರಂಭವಾಗಿ ಕೇವಲ ನಲವತ್ತು ದಿನಗಳಲ್ಲಿ ಚಿತ್ರದ ಸೆನ್ಸಾರ್ ಸಹ ಪೂರ್ಣವಾಗಿದ್ದು, ತೆರೆಗೆ ಬರಲು ಸಿದ್ದವಾಗಿದೆ. ಪ್ರಾದೇಶಿಕ ಸೆನ್ಸಾರ್ ಮಂಡಳಿ ಸಹ ಈ ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನಾಡಿದೆ. ಸಂಕ್ರಾಂತಿ ವೇಳೆಗೆ ಟ್ರೇಲರ್ ಬಿಡುಗಡೆಯಾಗಲಿದೆ.

ಭುವನ್ ಫಿಲಂಸ್ ಲಾಂಛನದಲ್ಲಿ ನಾರಾಯಣ್ ಹಾಗೂ ಕೋಡ್ಲು ರಾಮಕೃಷ್ಣ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.

ದೀಪು (ರಾಮನಗರ) ಈ ಚಿತ್ರದ ಸಹ ನಿರ್ಮಾಪಕರು ಕ್ರಿಶ್ ಜೋಶಿ ಅವರ ಕಥೆಗೆ ಕೋಡ್ಲು ರಾಮಕೃಷ್ಣ ಹಾಗೂ ರಾಮಮೂರ್ತಿ ಚಿತ್ರಕಥೆ ರಚಿಸಿದ್ದಾರೆ. ಕ್ರಿಶ್ ಜೋಶಿ ಅವರೊಡಗೂಡಿ ಕೋಡ್ಲು ರಾಮಕೃಷ್ಣ ಸಂಭಾಷಣೆ ಬರೆದಿದ್ದಾರೆ. ಶಮಿತ್ ಮಲ್ನಾಡ್ ಸಂಗೀತ ನಿರ್ದೇಶನ, ನಾಗೇಂದ್ರ ಛಾಯಾಗ್ರಹಣ ಹಾಗೂ ವಸಂತ್ ಕುಮಾರ್ ಸಂಕಲನ ಈ ಚಿತ್ರಕ್ಕಿದೆ.

ಮುಖ್ಯಮಂತ್ರಿ ಚಂದ್ರು, ವಿನಯಾ ಪ್ರಕಾಶ್, ಶಿವಧ್ವಜ್, ಪ್ರಥಮ ಪ್ರಕಾಶ್, ಟೆನ್ನಿಸ್ ಕೃಷ್ಣ, ಸುಧಾ ಬೆಳವಾಡಿ, ಕುಮಾರಿ ಐಶ್ವರ್ಯ, ಶ್ರೀಧರ್ ನಾಯಕ್ ಸ್ನೇಹ ಭಟ್, ಪ್ರಕಾಶ್, ಭವಾನಿ ಪ್ರಕಾಶ್, ಬೇಬಿ ಗಗನ, ಬೇಬಿ ಯಶಿಕಾ, ಬೇಬಿಶ್ರೀ, ಬೇಬಿ ಪ್ರತಿಷ್ಠ ದೇಶಪಾಂಡೆ, ಯುಕ್ತ ಹೆಗಡೆ, ಮಾಸ್ಟರ್ ವಿಷ್ಣು ಸಂಜಯ್, ಮಾಸ್ಟರ್ ತರುಣ್, ಮಾಸ್ಟರ್ ಸರ್ವಜ್ಞ, ಮಾಸ್ಟರ್ ಯುವರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Edited By : Nirmala Aralikatti
PublicNext

PublicNext

12/01/2021 07:26 pm

Cinque Terre

37.69 K

Cinque Terre

0

ಸಂಬಂಧಿತ ಸುದ್ದಿ