ಕನ್ನಡತಿಯಾದರೂ ತೆಲುಗು, ತಮಿಳು ಸಿನಿಮಾ ರಂಗದಲ್ಲಿ ದೊಡ್ಡ ಖ್ಯಾತಿ ಗಳಿಸಿದ, ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿದ ನಟಿ ಅನುಷ್ಕಾ ಶೆಟ್ಟಿ ಮತ್ತೆ ತಮ್ಮ ಕನ್ನಡ ಪ್ರೇಮವನ್ನು ಮೆರೆದಿದ್ದಾರೆ. ಒಂದೂ ಕನ್ನಡ ಸಿನಿಮಾದಲ್ಲಿ ನಟಿಸದೇ ಇದ್ದರೂ ಸಹ ಅನುಷ್ಕಾ ಶೆಟ್ಟಿ ತನ್ನ ಮಾತೃಭಾಷೆಯ ಮೇಲೆ ಪ್ರೀತಿ ಹಾಗೆಯೇ ಉಳಿಸಿಕೊಂಡಿದ್ದಾರೆ.
ಸಂಕ್ರಾಂತಿ ಹಬ್ಬಕ್ಕೆ ಫೇಸ್‌ಬುಕ್‌ನಲ್ಲಿ ಶುಭಾಶಯ ಕೋರಿರುವ ನಟಿ ಅನುಷ್ಕಾ ಶೆಟ್ಟಿ , 'ಎಲ್ಲರಿಗೂ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು' ಎಂದು ಕನ್ನಡದಲ್ಲಿ ಬರೆದಿದ್ದಾರೆ. ಇದೇ ಸಂದೇಶವನ್ನು ಇಂಗ್ಲೀಷ್‌ನಲ್ಲಿ ಸಹ ಬರೆದು, ತಮ್ಮದೇ ಒಂದು ಸುಂದರ ಚಿತ್ರವನ್ನು ಪ್ರಕಟಿಸಿದ್ದಾರೆ.
PublicNext
14/01/2021 03:35 pm