ಅಘನ್ಯ ಪಿಕ್ಚರ್ಸ್ ಲಾಂಛನದಲ್ಲಿ ವರ್ತೂರ್ ಮಂಜು ನಿರ್ಮಿಸುತ್ತಿರುವ 'ಶಂಭೋ ಶಿವ ಶಂಕರ' ಚಿತ್ರದ ದ್ವಿತೀಯ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ.
ಈಗಾಗಲೇ ಬೆಂಗಳೂರಿನಲ್ಲೇ 26 ದಿನಗಳ ಚಿತ್ರೀಕರಣ ನಡೆದಿದೆ. ಸುಪ್ರೀಂ ಹೀರೋ ಶಶಿಕುಮಾರ್, ನಾಯಕರಾದ ಅಭಯ್ ಪುನೀತ್, ರೋಹಿತ್, ರಕ್ಷಕ್, ನಾಯಕಿ ಸೊನಾಲ್ ಮಾಂಟೆರೊ, ಜೋಗಿ ನಾಗರಾಜ್, ಪ್ರದೀಪ್ ಟಿಪ್ಟೂರ್, ಆಶಾ ಸುಜಯ್, ಪ್ರೇಮ, ರೋಹಿಣಿ, ಸಂಗಮೇಶ್ ಮುಂತಾದ ಕಲಾವಿದರು ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ.
ಇದೇ ಮಾಸಾಂತ್ಯಕ್ಕೆ ಹಾಡಿನ ಚಿತ್ರೀಕರಣ ಸಹ ನಡೆಯಲಿದೆ. ಅದಕ್ಕಾಗಿ ಅದ್ದೂರಿ ಸೆಟ್ ನಿರ್ಮಾಣವಾಗುತ್ತಿದೆ, ಶಂಕರ್ ಕೋನಮಾನಹಳ್ಳಿ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಕಿರುತೆರೆಯಲ್ಲಿ ಜನಪ್ರಿಯ ಧಾರಾವಾಹಿಗಳನ್ನು ನಿರ್ದೇಶಿಸಿರುವ ಶಂಕರ್ ಕೋನಮಾನಹಳ್ಳಿ ಅವರಿಗೆ ಬೆಳ್ಳಿತೆರೆಯಲ್ಲಿ ಇದು ಮೊದಲ ಚಿತ್ರವಾಗಿದೆ.
ಕಥೆ, ಚಿತ್ರಕಥೆ, ಸಂಭಾಷಣೆಯನ್ನು ನಿರ್ದೇಶಕರೆ ಬರೆದಿದ್ದಾರೆ. ಗೌಸ್ ಫೀರ್ ಹಾಗೂ ಹಿತನ್ ಹಾಸನ್ ಹಾಡುಗಳನ್ನು ಬರೆದಿದ್ದು, ಹಿತನ್ ಹಾಸನ್ ಅವರೆ ಸಂಗೀತ ನೀಡುತ್ತಿದ್ದಾರೆ.
ನಟರಾಜ್ ಮುದ್ದಾಲ ಛಾಯಾಗ್ರಹಣ, ಕಲೆ ನೃತ್ಯ ನಿರ್ದೇಶನ ಹಾಗೂ ವೆಂಕಟೇಶ್ ಯುಡಿವಿ ಅವರ ಸಂಕಲನ ಈ ಚಿತ್ರಕ್ಕಿದೆ.
'ಶಂಭೋ ಶಿವ ಶಂಕರ' ಸಿನಿಮಾದ ಮೂವರು ನಾಯಕರ ಪಾತ್ರಗಳು ಪ್ರಮುಖವಾಗಿದ್ದು, ಅಭಯ್ ಪುನೀತ್, ರೋಹಿತ್ ಹಾಗೂ ರಕ್ಷಕ್ ಈ ಮೂರು ಪಾತ್ರಗಳಲ್ಲಿ ಕಾಣಿಸಿಕೊಳುತ್ತಿದ್ದಾರೆ.
PublicNext
16/01/2021 12:28 pm