ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಮೇಶ್ ಅರವಿಂದ್ ಪುತ್ರಿಯ ಅದ್ಧೂರಿ ಆರತಕ್ಷತೆಯಲ್ಲಿ ಸ್ಯಾಂಡಲ್ ವುಡ್ ಸಮಾಗಮ: ಸ್ಟೇಜ್ ಮೇಲೆ ಸ್ಟೆಪ್ ಹಾಕಿದ ತಾರೆಯರು…

ನಟ, ನಿರ್ದೇಶಕ ಹಾಗೂ ನಿರ್ಮಾಪಕ ರಮೇಶ್ ಅರವಿಂದ್– ಅರ್ಚನಾ ದಂಪತಿಯ ಪುತ್ರಿ ನಿಹಾರಿಕಾ ಮತ್ತು ಅಕ್ಷಯ್ ಅವರ ಮದುವೆ 2020ರ ಡಿಸೆಂಬರ್ 28 ಕುಟುಂಬದವರು ಮತ್ತು ಆಪ್ತ ಸಮ್ಮುಖದಲ್ಲಿ ಕೊರೊನಾ ನಿಯಮಾನುಸಾರ ನಡೆದಿತ್ತು.

ಜ.16 ರಂದು ಶನಿವಾರ ರಾತ್ರಿ ವಿವಾಹ ಆರತಕ್ಷತೆ ಸಮಾರಂಭ ಬೆಂಗಳೂರಿನ ಹೋಟೆಲ್ ವೊಂದರಲ್ಲಿ ಅದ್ಧೂರಿಯಾಗಿ ನೆರವೇರಿತು.

ಈ ಸಮಾರಂಭಕ್ಕೆ ರಾಜಕೀಯ ನಾಯಕರು ಹಾಗೂ ಚಿತ್ರರಂಗದ ಗಣ್ಯರು ಆಗಮಿಸಿ ನವ ಜೋಡಿಯನ್ನು ಹಾರೈಸಿದರು.

ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, ಸಚಿವರಾದ ಆರ್. ಅಶೋಕ್, ಸುರೇಶ್ ಕುಮಾರ್, ಡಾ. ಸುಧಾಕರ್, ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಸಂಸದರಾದ ಸುಮಲತಾ ಅಂಬರೀಷ್, ತೇಜಸ್ವಿ ಸೂರ್ಯ, ಶಾಸಕ ಮುನಿರತ್ನ ಸೇರಿದಂತೆ ಹಲವು ರಾಜಕಾರಣಿಗಳು ಆರತಕ್ಷತೆಯಲ್ಲಿ ಪಾಲ್ಗೊಂಡು, ನವದಂಪತಿಗೆ ಶುಭ ಹಾರೈಸಿದರು.

ಇತ್ತ ನಟರಾದ ರವಿಚಂದ್ರನ್, ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್, ಪುನೀತ್ರಾಜ್ಕುಮಾರ್, ಸುದೀಪ್, ಯಶ್, ಶ್ರೀಮುರಳಿ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಸಂಗೀತ ನಿರ್ದೇಶಕರಾದ ಹಂಸಲೇಖ, ಗುರುಕಿರಣ್, ಗಾಯಕ ವಿಜಯ್ ಪ್ರಕಾಶ್, ನಟಿಯರಾದ ರಾಧಿಕಾ ಪಂಡಿತ್, ಹರ್ಷಿಕಾ ಪೂಣಚ್ಚ ಸೇರಿದಂತೆ ಸಿನಿಮಾರಂಗದ ಹಲವು ಮಂದಿ ಈ ಸಮಾರಂಭದಲ್ಲಿ ಪಾಲ್ಗೊಂಡು, ನವಜೋಡಿಯನ್ನು ಹರಿಸಿದರು.

ಸುದೀಪ್, ಯಶ್, ಹರ್ಷಿಕಾ ಪೂಣಚ್ಚ ಹಾಗೂ ರಮೇಶ್ ಅರವಿಂದ್ ಅವರು ನವ ನವದಂಪತಿಯ ಜತೆಗೆ ಭರ್ಜರಿ ಸ್ಟೆಪ್ ಹಾಕಿ ಸಂಭ್ರಮಿಸಿದರು.

Edited By : Manjunath H D
PublicNext

PublicNext

18/01/2021 06:01 pm

Cinque Terre

88.32 K

Cinque Terre

1