ಬೆಂಗಳೂರು : ಮೂರು ಭಾಷೆ.. ಸಾವಿರ ಬೆಳ್ಳಿ ಪರದೆಗಳ ಮೇಲೆ ಆಕ್ಷನ್ ಪ್ರಿನ್ಸ್ ಧೃವ ಸರ್ಜಾ ಪೊಗರು ತೋರಿಸಲಿದ್ದಾರೆ.
ಹೌದು..! ಸ್ಯಾಂಡಲ್ ವುಡ್ ನ ಬಹು ನಿರೀಕ್ಷಿತ ಸಿನಿಮಾಗಳ ಪೈಕಿ ಧೃವ ಸರ್ಜಾ ಅಭಿನಯದ ಪೊಗರು ಸಿನಿಮಾ ಕೂಡ ಒಂದು. ಪೊಗರು ಸಿನಿಮಾ ಮುಂದಿನ ತಿಂಗಳು 19 ರಂದು ಬಿಡುಗಡೆಯಾಗುವುದಾಗಿ ಈಗಾಗಲೇ ಚಿತ್ರತಂಡ ತಿಳಿಸಿದೆ. ಈ ಕುರಿತು ಪೊಗರು ಚಿತ್ರತಂಡ ಸುದ್ದಿಗೋಷ್ಠಿ ನಡೆಸಿದೆ.
ಸುದ್ದಿಗೋಷ್ಠಿಯಲ್ಲಿ ಫೆಬ್ರವರಿ 19 ರಂದು ಸಿನಿಮಾ ರಿಲೀಸ್ ಆಗಲಿದೆ. ಮೂರು ಭಾಷೆಗಳಲ್ಲೂ ಸೇರಿ ದೊಡ್ಡಮಟ್ಟದಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.
ಸುದ್ದಿಗೋಷ್ಠಿಯಲ್ಲಿ ನಟ ರಾಘವೇಂದ್ರ ರಾಜ್ ಕುಮಾರ್, ನಟ ಧೃವ ಸರ್ಜಾ, ಸಲಗ ಚಿತ್ರದ ನಿರ್ಮಾಪಕ ಕೆ.ಪಿ.ಶ್ರೀಕಾಂತ್, ಕೆಜಿಎಫ್ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಗೌಡ,ಫ್ಯಾಂಟಮ್ ನಿರ್ಮಾಪಕ ಜಾಕ್ ಮಂಜು, ಕೋಟಿಗೊಬ್ಬ 3 ನಿರ್ಮಾಪಕ ಸೂರಪ್ಪ ಬಾಬು ಸೇರಿದಂತೆ ಹಲವರು ಭಾಗವಹಿಸಿದ್ದರು.
PublicNext
21/01/2021 11:01 am