ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ವೇಷ ಚಿತ್ರಕ್ಕೆ ಮುಹೂರ್ತ ಮರಿ ಟೈಗರ್ ಭಾಗಿ

ಹಂಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ನೂತನ ಸಿನಿಮಾ ವೇಷ, ಗವಿಪುರಂ ಗುಟ್ಟಳ್ಳಿ ಬಂಡೆ ಮಾಹಾಕಾಳಿ ದೇವಸ್ಥಾನದಲ್ಲಿ ಇತ್ತೀಚೆಗಷ್ಟೇ ಮುಹೂರ್ತ ಮುಗಿಸಿಕೊಂಡಿದೆ. ಈ ಮುಹೂರ್ತ ಕಾರ್ಯಕ್ರಮಕ್ಕೆ ಮರಿ ಟೈಗರ್ ವಿನೋದ್ ಪ್ರಭಾಕರ್ ಮುಖ್ಯ ಅತಿಥಿಯಾಗಿ ಆಗಮಿಸಿ ಹೊಸ ತಂಡಕ್ಕೆ ಬೆನ್ನು ತಟ್ಟಿ ಅಭಿನಂದನೆ ತಿಳಿಸಿದ್ದಾರೆ.

ಬಹುತೇಕ ಹೊಸಬರೇ ಸೇರಿ ವೇಷ ಚಿತ್ರವನ್ನು ತಯಾರು ಮಾಡುತ್ತಿದ್ದು ಈಗಾಗಲೇ ಉಡುಂಬಾ, ಗೂಳಿಹಟ್ಟಿ ಚಿತ್ರ ಸೇರಿ ಹಲವು ಸಿನಿಮಾಗಳ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿದ ಅನುಭವ ಇರುವ ಪವನ್ ಕೃಷ್ಣ ವೇಷ ಚಿತ್ರಕ್ಕೆ ನಿರ್ದೇಶನ ಸೈ ಎಂದಿದ್ದರೆ, ನಿರ್ಮಾಪಕನಾಗಿ ಬಂಡವಾಳ ಹೂಡುವುದರ ಜತೆಗೆ ನಾಯಕನಾಗಿಯೂ ಕಾಣಿಸಿಕೊಳ್ಳುತ್ತಿದ್ದಾರೆ ರಘು.

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಪವನ್ ಕೃಷ್ಣ, ಮಾಸ್, ಕಾಮಿಡಿ, ಸೆಂಟಿಮೆಂಟ್ ಮತ್ತು ಸಸ್ಪೆನ್ಸ್ ಹೀಗೆ ಈ ನಾಲ್ಕು ಅಂಶಗಳನ್ನು ಸೇರಿಸಿಕೊಂಡೇ ವೇಷ ಚಿತ್ರ ಮೂಡಿಬರಲಿದೆ. ಜೀವನದಲ್ಲಿ ಪ್ರತಿಯೊಬ್ಬರು ಒಂದೊಂದು ವೇಷ ಹಾಕಿರುತ್ತಾರೆ. ಇಲ್ಲಿ ಎಲ್ಲರಿಗೂ ಒಂದೊಂದು ವೇಷವಿದೆ, ಅದನ್ನು ಹಾಕಿದ ಉದ್ದೇಶ ಏನು ಎಂಬುದನ್ನು ಸಿನಿಮಾದಲ್ಲಿಯೇ ನೋಡಿ ಎನ್ನುತ್ತಾರೆ.

ಜ. 27ರಿಂದ ಚಿತ್ರೀಕರಣಕ್ಕೆ ಚಾಲನೆ ಸಿಗಲಿದ್ದು, ಉಡುಪಿ, ಚಿಕ್ಕಮಗಳೂರು, ಕುಂದಾಪುರ ಸೇರಿ ಹಲವೆಡೆ ಚಿತ್ರೀಕರಣ ಮಾಡಿಕೊಳ್ಳಲಿದೆ, ಸಿನಿಮಾ ತಂಡ. ಒಟ್ಟಾರೆ 40 ದಿನಗಳ ಒಂದೇ ಶೆಡ್ಯೂಲ್‌ನಲ್ಲಿ ಸಿನಿಮಾ ಚಿತ್ರೀಕರಣ ಮುಗಿಸಲು ನಿರ್ಮಾಪಕರ ಪ್ಲ್ಯಾನ್ ರೆಡಿ ಇದೆ.

ಈ ಚಿತ್ರದಲ್ಲಿ ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟಿ ವಾಣಿಶ್ರೀ ತಾಯಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ,ಯುವ ತಂಡದ ಜತೆಗೆ ಭಾಗಿಯಾಗಿ ಸಿನಿಮಾ ಮಾಡುತ್ತಿರುವುದಕ್ಕೆ ಅವರಿಗೂ ಖುಷಿ ಇದೆ. ಹೊಸಬರ ಸಿನಿಮಾಗಳು ಹೆಚ್ಚೆಚ್ಚು ಬರಬೇಕು. ಅವರಿಂದಲೇ ನಮಗೂ ಕೆಲಸ ಸಿಗುತ್ತದೆ ಎಂದರು.

ನಾಯಕ ರಘು ‘ಮೂಲತಃ ರಂಗಭೂಮಿ ಹಿನ್ನಲೆಯಿಂದ ಬಂದವರು ಮೊದಲ ಮೊದಲು ನಾಟಕ ಬರೆದು ಅಭಿನಯಿಸಿದ್ದ ಅವರು ಇತ್ತೀಚಿನ ಕೆಲ ವರ್ಷ ರಂಗಭೂಮಿ ಬಿಟ್ಟು ದೂರ ಉಳಿದು ಇದೀಗ ಸಿನಿಮಾ ಮೂಲಕ ಆಗಮಿಸುತ್ತಿದ್ದಾರೆ.

ಇನ್ನು ಈ ಸಿನಿಮಾದಲ್ಲಿ ಮಂಜು ಪಾವಗಡ ಶಿಕ್ಷಕನ ಪಾತ್ರ ನಿಭಾಯಿಸಿದರೆ, ಜಯ್ ಶೆಟ್ಟಿ ಪ್ರಮುಖ ಪಾತ್ರ ಬಣ್ಣ ಹಂಚಿದ್ದು. ಸೌಖ್ಯ ಗೌಡ ಮತ್ತು ನಿಧಿ ಮಾರೋಲಿ ನಾಯಕಿ ಪಾತ್ರಕ್ಕೆ ಸಾಂಪ್ರದಾಯಿಕ ಗೆಟಪ್‌ನಲ್ಲಿ ಈ ಸಿನಿಮಾದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ.

ಅದೇ ರೀತಿ ನಾಯಕಿಯ ತಂಗಿಯ ಪಾತ್ರದಲ್ಲಿ ನೇಹಾ ಗೌಡ ಆಯ್ಕೆಯಾಗಿದ್ದಾರೆ.

Edited By : Nirmala Aralikatti
PublicNext

PublicNext

21/01/2021 12:05 pm

Cinque Terre

42.02 K

Cinque Terre

0