ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದ ಅಕ್ರಮ ಕಲ್ಲು ಗಣಿಗಾರಿಕೆ ಸ್ಥಳದಲ್ಲಿ ಸಂಭವಿಸಿದ ಭಾರಿ ಸ್ಫೋಟಕ್ಕೆ ಇಡೀ ಜಿಲ್ಲೆ ಬೆಚ್ಚಿಬಿದ್ದಿದೆ. ದುರಂತದಲ್ಲಿ 8ಕ್ಕೂ ಹೆಚ್ಚು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಲಾರಿಯೊಂದರಲ್ಲಿ ತುಂಬಿದ್ದ ಜಿಲಿಟಿನ್ ಸ್ಫೋಟಗೊಂಡು ಈ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ. ಸ್ಫೋಟದ ತೀವ್ರತೆಗೆ ಲಾರಿ ಛಿದ್ರ ಛಿದ್ರವಾಗಿದ್ದು, ಲಾರಿಯಲ್ಲಿದ್ದ ಎಲ್ಲಾ ಕಾರ್ಮಿಕರು ಸಾಪನ್ನಪ್ಪಿದ್ದಾರೆ. ಸ್ಫೋಟದ ತೀವ್ರತೆ ಹೇಗಿತ್ತು ಭಯಾನಕವಾಗಿತ್ತು.
ಈ ದುರಂತ ಘಟನೆ ಬಗ್ಗೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಹ ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಮೃತ ಬಡ ಕಾರ್ಮಿಕರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಕೂಡಲೇ ಸರ್ಕಾರ ಮೃತರ ಕುಟುಂಬದ ನೆರವಿಗೆ ಧಾವಿಸಬೇಕು ಎಂದು ಮನವಿ ಮಾಡಿದ್ದಾರೆ.
PublicNext
22/01/2021 02:40 pm