ಕಿಚ್ಚ ಸುದೀಪ್ ಅವರ ಆಶೀರ್ವಾದದದಿಂದ ಅಂಕಿತ ಫಿಲಂಸ್ ಲಾಂಛನದಲ್ಲಿ ಭಾರತಿ ಜಗ್ಗಿ ನಿರ್ಮಿಸುತ್ತಿರುವ ಮರ್ಧನಿ ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಮೈಸೂರು, ಚಿಕ್ಕಮಗಳೂರಿನಲ್ಲಿ ಹತ್ತು ದಿನಗಳ ಚಿತ್ರೀಕರಣ ನಡೆದಿದೆ.
ಇನ್ನೂ ಇಪ್ಪತ್ತೈದು ದಿನಗಳ ಚಿತ್ರೀಕರಣ ಬಾಕಿಯಿದ್ದು, ಮಾರ್ಚ್ ತಿಂಗಳಲ್ಲಿ ಇನ್ನುಳಿದ ಚಿತ್ರೀಕರಣ ಆರಂಭವಾಗಲಿದೆ.
ಈ ಹಿಂದೆ ದೇವರಂಥ ಮನುಷ್ಯ (ಹೊಸದು) ನಿರ್ದೇಶಿಸಿದ್ದ, ಕಿರಣ್ ಕುಮಾರ್ ವಿ ಈ ಚಿತ್ರದ ನಿರ್ದೇಶಕರು. ಹೋಟೆಲ್ ಮ್ಯಾನೆಜ್‌ಮೆಂಟ್ ನಲ್ಲಿ ಗೋಲ್ಡ್ ಮೆಡಲ್,ಕರಾಟೆಯಲ್ಲಿ ಬ್ಲ್ಯಾಕ್ ಬೆಲ್ಟ್ ಹಾಗೂ ಗೋಲ್ಡ್ ಮೆಡಲ್ ಪಡೆದಿರುವ ಅಕ್ಷಯ್ ಈ ಚಿತ್ರದ ನಾಯಕ. ರಾಜಕುಮಾರ್ ಸಂತೋಷಿ ಅವರ ಬಳಿ ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿರುವ ಅಕ್ಷಯ್ ಈ ಚಿತ್ರದ ಮೂಲಕ ನಾಯಕ ನಟನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ.
ಅಕ್ಷಯ್ ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಹಿತನ್ ಗೌಡ, ಮನೋಹರ್, ಭಾಗ್ಯಲಕ್ಷ್ಮೀ ಗೌಡ, ಮೈಸೂರು ಮಾಲತಿ, ಮಧು, ಸಂತೋಷ್ ಶೆಟ್ಟಿ ಮುಂತಾದವರು ಈ ಚಿತ್ರದ ತಾರಾ ಬಳಗದಲ್ಲಿದ್ದಾರೆ.
ಈ ಸಿನಿಮಾದಲ್ಲಿ ಮೂರು ಹಾಡುಗಳಿದ್ದು, ಹಿತನ್ ಹಾಸನ್ ಸಂಗೀತ ನೀಡುತ್ತಿದ್ದಾರೆ. ಶಿವಸಾಗರ್ ಛಾಯಾಗ್ರಹಣ, ಎಂ.ಎನ್.ವಿಶ್ವ ಸಂಕಲನ, ಪ್ರೇಂ ನೃತ್ಯ ನಿರ್ದೇಶನ ಹಾಗೂ ಮಾಸ್ ಮಾದ ಅವರ ಸಾಹಸ ನಿರ್ದೇಶನವಿರುವ ಈ ಚಿತ್ರಕ್ಕೆ ಗಜೇಂದ್ರ ಸಂಭಾಷಣೆ ಬರೆದಿದ್ದಾರೆ. ಚಿತ್ರದಲ್ಲಿ ನಾಯಿಯೊಂದು ಪ್ರಮುಖ ಪಾತ್ರದಲ್ಲಿ ನಟನೆ ಮಾಡುತ್ತಿರುವುದು ವಿಶೇಷ.
PublicNext
23/01/2021 01:45 pm