ಶೀರ್ಷಿಕೆಯಲ್ಲೇ ವಿಭಿನ್ನತೆ ಇರುವ ಮಂಗಳವಾರ ರಜಾದಿನ ಚಿತ್ರ ಫೆಬ್ರವರಿ 5 ರಂದು ಬಿಡುಗಡೆಯಾಗುತ್ತಿದೆ. ಚಿತ್ರಕ್ಕೆ ಪ್ರಾದೇಶಿಕ ಸೆನ್ಸಾರ್ ಮಂಡಳಿಯಿಂದ ಯು/ಎ ಪತ್ರ ನೀಡಲಾಗಿದ್ದು, ಪ್ರೇಕ್ಷಕನ ಮಡಿಲಿಗೆ ಬರಲು ತಯಾರಾಗಿದೆ.
ಕ್ಷೌರಿಕನೊಬ್ಬ ನಟ ಸುದೀಪ್ ಅವರಿಗೆ ಕೇಶವಿನ್ಯಾಸ ಮಾಡಬೇಕೆಂದು ಆಸೆ ಇರುತ್ತದೆ. ಈ ಆಸೆ ಏನಾಗುತ್ತದೆ ? ಎನ್ನುವುದೇ ಚಿತ್ರದ ಕಥಾ ಸಾರಾಂಶ. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಮೊದಲ ಬಾರಿಗೆ ಈ ಸಿನಿಮಾದಲ್ಲಿ ತಂದೆ ಮಗನ ಬಾಂಧವ್ಯದ ಹಾಡೊಂದನ್ನು ಹಾಡಿದ್ದಾರೆ. ಗೌಸ್ ಫಿರ್ ಬರೆದಿರುವ ಈ ಹಾಡಿಗೆ ಋತ್ವಿಕ್ ಮುರಳಿಧರ್ ಸಂಗೀತ ನೀಡಿದ್ದಾರೆ.
ಗಣರಾಜ್ಯೋತ್ಸವದ ದಿನ ಈ ಹಾಡು ಈಗಾಗಲೇ ಬಿಡುಗಡೆಯಾಗಿದೆ. ಹಾಡಿನ ಪ್ರೋಮೊ ಸಹ ಬಿಡುಗಡೆ ಆಗಿದ್ದು, ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ಸ್ಟುಡಿಯೋ 18ರ ಸುಧೀರ್ ಕೆ.ಎಂ (ಬ್ಯಾಡ್ ಮ್ಯಾನರ್ಸ್ ಚಿತ್ರದ ನಿರ್ಮಾಪಕರು) ಈ ಚಿತ್ರವನ್ನು ವೀಕ್ಷಿಸಿ ಖುಷಿ ತಾವೇ ಚಿತ್ರ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ತ್ರಿವರ್ಗ ಫಿಲಂಸ್ ಲಾಂಛನದಲ್ಲಿ ನಿರ್ಮಾಣದ ಈ ಚಿತ್ರವನ್ನು ಯವಿನ್ ನಿರ್ದೇಶಿಸಿದ್ದಾರೆ.
ಬಿಗ್‌ಬಾಸ್ ಖ್ಯಾತಿಯ ಚಂದನ್ ಆಚಾರ್ ನಾಯಕನಾಗಿ ನಟಿಸಿದ್ದಾರೆ. ಚಂದನ್ ಆಚಾರ್ ಈ ಚಿತ್ರದಲ್ಲಿ ಕ್ಷೌರಿಕನ ಪಾತ್ರ ನಿರ್ವಹಣೆ ಮಾಡಿದ್ದಾರೆ. ಲಾಸ್ಯ ನಾಗರಾಜ್ ಈ ಚಿತ್ರದ ನಾಯಕಿ. ಜಹಂಗೀರ್, ರಜನಿಕಾಂತ್, ಗೋಪಾಲ್ ದೇಶಪಾಂಡೆ, ನಂದನ್ ರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಪ್ರಜೋತ್ ಡೇಸಾ ಸಂಗೀತ ನೀಡಿದ್ದಾರೆ. ಋತ್ವಿಕ್ ಮುರಳೀಧರ್ ಹಿನ್ನೆಲೆ ಸಂಗೀತ, ಉದಯ್ ಲೀಲಾ ಛಾಯಾಗ್ರಹಣ ಹಾಗೂ ಮಧು ತುಂಬಕೆರೆ ಸಂಕಲನ ಈ ಚಿತ್ರಕ್ಕಿದೆ.
PublicNext
28/01/2021 08:13 pm