ಬೆಂಗಳೂರು: ಕನ್ನಡ ಸೇರಿದಂತೆ ಇತರೆ ಭಾಷೆಗಳಲ್ಲೂ ಸಿನಿಪ್ರಿಯರು ಕಾತರದಿಂದ ಕಾಯುತ್ತಿರುವ ಕೆಜಿಎಫ್ ಚಾಪ್ಟರ್ 2 ಚಿತ್ರದ ಬಿಡುಗಡೆ ದಿನಾಂಕ ಇಂದು ಫಿಕ್ಸ್ ಆಗಲಿದೆ.
ಹೊಂಬಾಳೆ ಫಿಲಂಸ್ ಬ್ಯಾನರ್ ಅಡಿ ವಿಜಯ್ ಕಿರಗಂದೂರು ನಿರ್ಮಾಣದ ಕೆಜಿಎಫ್ ಚಾಪ್ಟರ್ 2 ಚಿತ್ರದ ಟೀಸರ್ ಈಗಾಗಲೇ ಭಾರೀ ಸದ್ದು ಮಾಡಿದೆ. ಟೀಸರ್ ನೋಡಿದ ಅಭಿಮಾನಿಗಳು ಸಿನಿಮಾ ನೋಡಲು ಕಾತುರ ವ್ಯಕ್ತಪಡಿಸಿದ್ದರು. ಅವರಿಗೆ ಚಿತ್ರತಂಡವು ಸಿಹಿ ಸುದ್ದಿ ಕೊಟ್ಟಿದೆ.
ಈ ಕುರಿತು ಟ್ವೀಟ್ ಮಾಡಿರುವ ನಿರ್ಮಾಪಕ ವಿಜಯ್ ಕಿರಗಂದೂರು, ಇಂದು ಸಂಜೆ 6:32 ಗಂಟೆಗೆ ಕೆಜಿಎಫ್ ಚಾಪ್ಟರ್ 2 ರಿಲೀಸ್ ದಿನಾಂಕವನ್ನು ಪ್ರಕಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
PublicNext
29/01/2021 11:24 am