ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುತೂಹಲಕಾರಿ ಕಥಾಹಂದರದ 'ಸ್ಕೇರಿ ಫಾರೆಸ್ಟ್' ಸಿನಿಮಾ ಫೆಬ್ರವರಿಯಲ್ಲಿ ತೆರೆಗೆ

ಕನ್ನಡದಲ್ಲಿ ಸಾಕಷ್ಟು ಹಾರಾರ್ ಕಥಾ ಹಂದರವಿರುವ ಚಿತ್ರಗಳು ಬಂದಿವೆ. ಆದರೆ ವಿಭಿನ್ನ ಕಥೆಯುಳ್ಳ 'ಸ್ಕೇರಿ ಫಾರೆಸ್ಟ್' ಚಿತ್ರ ಫೆಬ್ರವರಿ 26ರಂದು ಬಿಡುಗಡೆಯಾಗಲಿದೆ. ಈ ಚಿತ್ರಕ್ಕೆ ಪ್ರೀತಿ- ಭಯ- ಆತ್ಮ ಎಂಬ ಅಡಿಬರಹವಿದೆ.

ಸ್ನಾತಕೋತ್ತರ ಪದವಿ ವಿದ್ಯಾರ್ಥಿ ಸ್ನೇಹಿತಯರು ಸಂಶೋಧನೆಗಾಗಿ ಕಾಡಿಗೆ ತೆರಳುತ್ತಾರೆ. ‌ಆಗ ಕಾಡಿನಲ್ಲಿ ಏನೆಲ್ಲಾ ನಡೆಯುತ್ತದೆ? ಎನ್ನುವುದು ಈ ಚಿತ್ರದ ಕಥಾವಸ್ತು ಮೂಲತಃ ತುಮಕೂರಿನ ಮಾರಶೆಟ್ಟಿ ಹಳ್ಳಿಯವರಾದ ಜಯಪ್ರಭು ಆರ್ ಲಿಂಗಾಯಿತ್ ಈಗ ಮುಂಬೈನಲ್ಲಿ ನೆಲೆಸಿದ್ದಾರೆ. ಅವರೆ ಈ ಚಿತ್ರದ ನಿರ್ಮಾಪಕರು.

ಮುಂಬೈನಲ್ಲಿ ವಾಸವಿದ್ದರೂ ನನಗೆ ಕನ್ನಡದ ಬಗ್ಗೆ ಅಪಾರ ಪ್ರೇಮ ಹಾಗೂ ವರನಟ ಡಾ. ರಾಜಕುಮಾರ್ ಅವರ ಅಪ್ಪಟ ಅಭಿಮಾನಿ. ಅವರ ಅಭಿನಯದ ಚಿತ್ರಗಳೇ ನನಗೆ ಚಿತ್ರ ನಿರ್ಮಾಣಕ್ಕೆ ಸ್ಫೂರ್ತಿ ಎನ್ನುತ್ತಾರೆ ಜಯಪ್ರಭು.

ಸ್ನೇಹಿತರೊಬ್ಬರು ಹಿಂದಿ ಚಿತ್ರ ನಿರ್ಮಾಣಕ್ಕೆ ಹಣ ಹೂಡಲು ಕೇಳಿದಾಗ ಕನ್ನಡದಲ್ಲಿಯೂ ನಿರ್ಮಾಣ ಮಾಡಿದರೆ ಮಾತ್ರ‌ ಹಣ ಹೂಡುವುದಾಗಿ ಹೇಳಿದ್ದ ಜಯಪ್ರಭು. ಚಿತ್ರದ ತಾಂತ್ರಿಕ ವರ್ಗದಲ್ಲೂ ಹೆಚ್ಚಿನ ಪಾಲು ಕನ್ನಡಿಗರಿಗೆ ನೀಡಿದ್ದಾರೆ. ಕನ್ನಡ ಹಾಗೂ ಹಿಂದಿ ಭಾಷೆಗಳಲ್ಲಿ ನಿರ್ಮಾಣವಾಗಿರುವ ಈ ಚಿತ್ರವನ್ನು ಬಾಲಿವುಡ್‌ನಲ್ಲಿ‌ ಅನುಭವ ಹೊಂದಿರುವ ಸಂಜಯ್ ಅಭೀರ್ ನಿರ್ದೇಶಿಸಿದ್ದಾರೆ.‌ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ನಿರ್ದೇಶಕರೇ ಬರೆದಿದ್ದಾರೆ.

ಕನ್ನಡದ ಯುವ ಪ್ರತಿಭೆ ಆದಿ ಹಾಗೂ ಎಲ್.ಕೆ.ಲಕ್ಷ್ಮೀಕಾಂತ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ‌ಹಿನ್ನಲೆ ಸಂಗೀತ ಲಕ್ಷ್ಮೀಕಾಂತ್ ಅವರದು. ಹಾಲಿವುಡ್ ಜಂಗಲ್ ಬುಕ್ 1994, ಹಿಂದಿಯ ರಾಗಿಣಿ ಎಂ.ಎಂ.ಎಸ್-2 ಸೇರಿದಂತೆ ಮುಂತಾದ ಹೆಸರಾಂತ ಚಿತ್ರಗಳ ಛಾಯಾಗ್ರಾಹಕ ನರೇನ್ ಗೇಡಿಯಾ ಅವರ ಛಾಯಾಗ್ರಹಣ, ರಾಜೇಶ್ ಶಾ ಸಂಕಲನ ಹಾಗೂ‌ ದೀಪಕ್ ಶರ್ಮ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಕುತೂಹಲಕಾರಿ ಕಥೆಯೊಂದಿಗೆ ಟ್ರಯಾಂಗಲ್ ಲವ್ ಸ್ಟೋರಿ ಸಹ ಈ ಚಿತ್ರದಲ್ಲಿದೆ. ನಿರ್ಮಾಪಕ‌ ಜಯಪ್ರಭು ಸಹ‌ ಈ ಚಿತ್ರದ ನಾಯಕನಾಗಿ ಅಭಿನಯಿಸಿದ್ದಾರೆ. ಜೀತ್ ರಾಯ್ದತ್ ಈ ಚಿತ್ರದ ದ್ವಿತೀಯ ನಾಯಕ. ಬಹುಭಾಷ ನಟ ಯಶ್ ಪಾಲ್ ಶರ್ಮ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಕೊಡಗಿನ‌ ಟೀನಾ ಪೊನ್ನಪ್ಪ, ಆಮ್‌ ರೀನ್, ಕಲ್ಪನಾ ಈ ಚಿತ್ರದ ನಾಯಕಿಯರು.

ಇದಷ್ಟೇ ಅಲ್ಲದೆ ಅನುಭವಿ ಕಲಾವಿದರ ದೊಡ್ಡ ತಾರಾಬಳಗ ಈ ಚಿತ್ರದಲ್ಲಿದೆ. ಮುಖ್ಯವಾಗಿ ನಿರ್ಮಾಪಕರ ಪುತ್ರಿ ಬೇಬಿ ಪೂಜಾ ಸಹ ಈ‌ ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸಿದ್ದಾರೆ.

Edited By : Vijay Kumar
PublicNext

PublicNext

30/01/2021 03:58 pm

Cinque Terre

43.34 K

Cinque Terre

0